ಪುತ್ತೂರು: ಬಡಗನ್ನೂರು ಗ್ರಾಮದ ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ ೧೦ ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ರೈ ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದ ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಸತತ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 11.87 ಮೀಟರ್ ದೂರ ಗುಂಡನ್ನು ಎಸೆದು ಈಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಅಕ್ಟೋಬರ್ ತಿಂಗಳಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ 17ರ ವಯೋಮಾನದ ಬಾಲಕಿಯರ ಗುಂಡು ಎಸೆತದಲ್ಲಿ ತನುಶ್ರೀ ರೈ ಅವರು 11.55 ಮೀಟರ್ ಗುಂಡೆಸೆದು ನೂತನ ಕೂಟ ದಾಖಲೆಯೊಂದಿಗೆ ಪ್ರಥಮ ಸ್ಥಾನ ಪಡೆದಿದ್ದರು. ನ.4 ಮತ್ತು 5 ರಂದು ಮಂಗಳೂರು ಮಂಗಳ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 11.44 ಮೀಟರ್ ದೂರ ಎಸೆದು ಹೊಸ ಕೂಟ ದಾಖಲೆಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.
ಈಕೆಗೆ ಪಟ್ಟೆ ವಿದ್ಯಾಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ. ಮೋನಪ್ಪ ತರಬೇತಿ ನೀಡಿದ್ದಾರೆ.
























