ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಆಶ್ರಯದಲ್ಲಿ ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ ನ.14 ಹಾಗೂ 15 ರಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಐಕ್ಯೂಎಸಿ ವಿಭಾಗದ ಡೀನ್ ಪ್ರೊ.ಶಿವಪ್ರಸಾದ್ ಕೆ.ಎಸ್. ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಿವೇಕಾನಂದ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ 2022 ರಲ್ಲಿ ಸ್ವಾಯತ್ತ ಸ್ಥಾನಮಾನ ಪಡೆದುಕೊಂಡಿದ್ದು, ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಸಮಾಜ ಹಾಗೂ ವಿಜ್ಞಾನ ಕ್ಷೇತ್ರ ಸಹಿತ ಭಾಷಾ ವಿಭಾಗದಲ್ಲಿ ಮುಂದಿನ ಹಂತ ತಲುಪುವಲ್ಲಿ ವಿದ್ಯಾರ್ಥಿಗಳು ಗೊಂದಲದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಪೂರಕವಾಗುವ ನಿಟ್ಟಿನಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ನ.14 ರಂದು ಕಾಲೇಜಿನ ಭಾಷಾ ವಿಭಾಗದಿಂದ ‘ಭಾಷಾ ಶಿಕ್ಷಣದ ಪ್ರಸ್ತುತ ಸ್ಥಿತಿಗತಿ ಹಾಗೂ ಭವಿಷ್ಯದ ಸಾಧ್ಯತೆ’ ಕುರಿತು ವಿಚಾರ ಸಂಕಿರಣ ನಡೆಯಲಿದ್ದು, ಮಂಗಳೂರು ಕೆನರಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಜಿ.ಎನ್.ಭಟ್‍ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡುವರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್‍ಅಧ್ಯಕ್ಷತೆ ವಹಿಸುವರು. ಬಳಿಕ ನಡೆಯುವ ವಿಚಾರಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಪ್ರಾಂಶುಪಾಲ ಡಾ.ಎಚ್.ಮಾಧವ ಭಟ್, ಕಾಸರಗೋಡು ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದ ಡಾ.ರಾಧಾಕೃಷ್ಣ ಬೆಳ್ಳೂರು, ಕೇರಳ ಕೇಂದ್ರೀಯ ವಿವಿಯ ಹಿಂದಿ ವಿಭಾಗದ ಡಾ.ತಾರು ಎಸ್.ಪವಾರ್ ಪಾಲ್ಗೊಳ್ಳಲಿದ್ದರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ ವಹಿಸುವರು. ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ವರದರಾಜ ಚಂದ್ರಗಿರಿ ಸಮಾರೋಪ ಭಾಷಣ ಮಾಡುವರು ಎಂದು ತಿಳಿಸಿದರು.
ನ.15 ರಂದು “ಸಮಾಜ ವಿಜ್ಞಾನದ ಪ್ರಸ್ತುತ ಸ್ಥಿತಿಗತಿ ಹಾಗೂ ಭವಿಷ್ಯದ ಸಾಧ್ಯತೆಗಳು” ಕುರಿತು ವಿಚಾರ ಸಂಕಿರಣ ನಡೆಯಲಿದ್ದು, ಹಾವೇರಿ ಯುನಿವರ್ಸಿಟಿ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಸಿದ್ದಪ್ಪ ಟಿ. ಬಾಗಲಕೋಟ್ ಉದ್ಘಾಟಿಸಿ, ದಿಕ್ಸೂಚಿ ಭಾಷಣ ಮಾಡುವರು. ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಪತಿ ಕಲ್ಲೂರಾಯ, ನಿವೃತ್ತ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್, ಪ್ರೊ.ಎಸ್.ಟಿ.ಬಾಗಲಕೋಟ್ ಪಾಲ್ಗೊಳ್ಳಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಭಾಷಣವನ್ನು ತುಮಕೂರು ವಿವಿಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ.ರವೀಂದ್ರ ಬೈಪದವು ಮಾಡಲಿದ್ದು, ಮುಖ್ಯ ಅತಿಥಿಯಾಗಿ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸ್ನಾತಕೋತ್ತರ ವಿಭಾಗದ ಡಾ.ವಿಜಯಸರಸ್ವತಿ ಬಿ., ಹಿಂದಿ ವಿಭಾಗದ ಡೀನ್‍ಡಾ.ದುರ್ಗಾರತ್ನ ಸಿ., ಪತ್ರಿಕೋದ್ಯಮ ವಿಭಾಗದ ಹವ್ಯಶ್ರೀ ಉಪಸ್ಥಿತರಿದ್ದರು.