ಕೆಕೆಆರ್‌ಡಿಬಿಯ 300 ಕೋ. ರೂ. ಅನುದಾನ ದುರ್ಬಳಕೆ ಆರೋಪ
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ 2020-2023ರಲ್ಲಿ ಕೆಕೆಆರ್‌ಡಿಬಿಗೆ ಬಿಡುಗಡೆ ಮಾಡಿದ 300 ಕೋಟಿ ಅನುದಾನದಲ್ಲಿ ವ್ಯಾಪಕ ಅವ್ಯವಹಾರ ನಡೆದಿರುವ ಆರೋಪದ ಕುರಿತು ತನಿಖೆ ನಡೆಸಲು ಸಮಿತಿ ರಚಿಸುವ ಮೂಲಕ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ಹಣಿಯಲು ಇನ್ನೊಂದು ಅಸ್ತ್ರ ರೆಡಿ ಮಾಡಿದೆ.
ಕಲ್ಯಾಣ-ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) ಅಕ್ರಮದ ಕುರಿತು ತನಿಖೆಗೆ ಆದೇಶ ಹೊರಡಿಸಿ ಕೋವಿಡ್ ಹಗರಣದ ತನಿಖೆಗೆ ಬಳಿಕ ಯಡಿಯೂರಪ್ಪ ವಿರುದ್ಧ ಮತ್ತೊಂದು ಹಗರಣದ ತನಿಖೆಗೆ ಸರ್ಕಾರ ಸಮಿತಿ ರಚನೆ ಮಾಡಿದೆ. 300 ಕೋಟಿ ಅನುದಾನ ಅಕ್ರಮ ಆಗಿದೆ ಎಂದು ತನಿಖೆಗೆ ಸರ್ಕಾರ ಸಮಿತಿ ರಚನೆ ಮಾಡಿದೆ.
2020-2023ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘ ರಚನೆ ಮಾಡಲಾಗಿತ್ತು. ಈ ಅವಧಿಯಲ್ಲಿ ದತ್ತಾತ್ರೇಯ ಪಾಟೀಲ್ ರೇವೂರ ಅಧ್ಯಕ್ಷರಾಗಿದ್ದರು. ಆಗ ಯಡಿಯೂರಪ್ಪ ಸಿಎಂ ಆಗಿದ್ದರು. ಪ್ರತಿ ವರ್ಷ 100 ಕೋಟಿಯಂತೆ 300 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು. ಈ ಅನುದಾನ ದುರ್ಬಳಕೆ ಆಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ತನಿಖೆಗೆ ಸಮಿತಿ ರಚನೆ ಮಾಡಿದೆ.