ಪುತ್ತೂರು: ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪುತ್ತೂರು ಮಂಡಲ ಪ್ರವಾಸ ಮಾಡಿ ಅಟಲ್ ಸದಸ್ಯತನ ನೋಂದಾವಣೆ ಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು.
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ ಸದಸ್ಯತನ ಗುರಿ ಹಾಗೂ ಮುಂದಿನ ದಿನಗಳಲ್ಲಿ ಇನ್ನಷ್ಟು ಸದಸ್ಯತನ ನೋಂದಾವಣೆ ಮಾಡುವ ಬಗ್ಗೆ ಮತ್ತು ಗ್ರಾಮ ಪಂಚಾಯತ್ ಉಪಚುನಾವಣೆಯ ಕಾರ್ಯತಂತ್ರದ ಕುರಿತು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ರಾಜ್ಯ ಒಬಿಸಿ ಮೋರ್ಛ ಕಾರ್ಯದರ್ಶಿ ಆರ್.ಸಿ.ನಾರಾಯಣ್, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ನಗರ ಸಭೆ ಅಧ್ಯಕ್ಷೆ ಲೀಲಾವತಿ ಕೃಷ್ಣನಗರ, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಎರಡು ಮಂಡಲಗಳ ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಪ್ರಶಾಂತ್ ನೆಕ್ಕಿಲಾಡಿ, ಅನಿಲ್ ತೆಂಕಿಲ, ನಾಗೇಶ್ ಪ್ರಭು ಸೇರಿದಂತೆ ಹಿರಿಯ ಪ್ರಮುಖರು, ಎರಡು ಮಂಡಲಗಳ ಪದಾಧಿಕಾರಿಗಳು, ನಿಕಟಪೂರ್ವ ಪದಾಧಿಕಾರಿಗಳು, ವಿವಿಧ ಮೋರ್ಛಗಳ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ ಅಧ್ಯಕ್ಷ, ಕಾರ್ಯದರ್ಶಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
ನಗರ ಮಂಡಲದ ಪ್ರ.ಕಾರ್ಯದರ್ಶಿ ಅನಿಲ್ ತೆಂಕಿಲ ಸ್ವಾಗತಿಸಿ , ಗ್ರಾಮಾಂತರ ಮಂಡಲ ಪ್ರ.ಕಾರ್ಯದರ್ಶಿ ಉಮೇಶ್ ಕೋಡಿಬೈಲು ವಂದಿಸಿದರು.