ನ.15 : ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನೆ | ಜನರ ಭವಿಷ್ಯದ ಮೇಲಾಗುವ ಪರಿಣಾಮಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಸಮುದಾಯದವರು ಪಾಲ್ಗೊಳ್ಳಿ : ಸುರೇಶ್‍ ಬೈಲು

ಕಡಬ: ನ.15 ಶುಕ್ರವಾರ ಕಸ್ತೂರಿರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಈ ಭಾಗದ ಜನರು ಭಾಗವಹಿಸುವ ಮೂಲಕ ಜನರ ಭವಿಷ್ಯದ ಮೇಲಾಗುವ ಪರಿಣಾಮಕ್ಕೆ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಕರೆ ನೀಡಿದ್ದಾರೆ.

ವರದಿ ಜಾರಿಗೆ ತುದಿಕಾಲಲ್ಲಿ ನಿಂತಿರುವ ವ್ಯವಸ್ಥೆಯ ವಿರುದ್ಧ ನಾವು ಸಂಘಟಿತವಾಗಿ ಹೋರಾಟ ಮಾಡಬೇಕಾಗಿತ್ತು.

ಈ ಹಿನ್ನಲೆಯಲ್ಲಿ ನ.15ರಂದು ಗುಂಡ್ಯದಲ್ಲಿ ನಡೆಯುವ ಬೃಹತ್ ಪ್ರತಿಭಟನೆಗೆ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಸಂಪೂರ್ಣ ಬೆಂಬಲ ಇದ್ದು, ಸಮುದಾಯದವರು ಒಂದು ದಿನದ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕಾಗಿ ಸುರೇಶ್ ಬೈಲು ವಿನಂತಿಸಿದ್ದಾರೆ.





































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top