ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | ಆರೋಪಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಜಿಲ್ಲಾ ಸತ್ರ ನ್ಯಾಯಾಲಯ

ಪುತ್ತೂರು: ಅಪ್ರಾಪ್ತ ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿಗೆ ಪೋಕ್ಸೋ ಕಾಯ್ದೆಯಡಿ 3 ವರ್ಷಗಳ ಜೈಲು ಶಿಕ್ಷೆ ಮತ್ತು ರೂ.20 ಸಾವಿರ ದಂಡ ವಿಧಿಸಿದೆ.

ದಂಡ ತೆರಲು ತಪ್ಪಿದಲ್ಲಿ ಮತ್ತೆ 6 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶ ಸರಿತಾ ಡಿ ಅವರು ತೀರ್ಪು ನೀಡಿದ್ದಾರೆ.

ಕಬಕ ಗ್ರಾಮದ ವಿದ್ಯಾಪುರ ನಿವಾಸಿ ಮಹಮ್ಮದ್ ಮುಸ್ತಾಫ ಯಾನೆ ಮುಸ್ತಾಫ ಶೇಖ್ ಶಿಕ್ಷೆಗೆ ಗುರಿಯಾದ ಅಪರಾಧಿ.





































 
 

ಮುಸ್ತಾಫ ಶೇಖ್ 2015ರ ಡಿಸೆಂಬರ್ 4ರಂದು ಕಬಕ ಗ್ರಾಮದ ಬೈಪದವು ಎಂಬಲ್ಲಿ ಅಂಗಡಿಗೆಂದು ಕಾಲುದಾರಿಯಲ್ಲಿ ಬರುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕೈ ಹಿಡಿದು ಎಳೆದು ತಬ್ಬಿಕೊಂಡು ಮುತ್ತು ಕೊಡಲು ಮುಂದಾದ ಸಂದರ್ಭದಲ್ಲಿ ಬಾಲಕಿ ಆತನನ್ನು ದೂಡಿ ತಪ್ಪಿಸಿಕೊಂಡು ಬಂದು ಬೊಬ್ಬೆ ಹೊಡೆದಿದ್ದರು. ಬೊಬ್ಬೆ ಕೇಳಿ ಕೆಲವರು ಅಲ್ಲಿಗೆ ಬಂದಾಗ ಆರೋಪಿ ಅಲ್ಲಿಂದ ಪರಾರಿಯಾಗಿದ್ದ ಬಾಲಕಿ ಘಟನೆ ಕುರಿತು ಮನೆಯವರಲ್ಲಿ ವಿಷಯ ತಿಳಿಸಿದ್ದು ಆಕೆಯ ತಾಯಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಠಾಣೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಒಟ್ಟು 14 ಮಂದಿ ಸಾಕ್ಷಿದಾರರನ್ನು ವಿಚಾರಿಸಿದರು.ಆರೋಪಿ ತಪ್ಪಿತಸ್ಥನೆಂದು ತೀರ್ಮಾನಿಸಿ ಭಾರತೀಯ ದಂಡ ಸಂಹಿತೆ ಕಲಂ 341 ರಡಿಯ ಅಪರಾಧಕ್ಕೆ 1 ತಿಂಗಳ ಸಾದಾ ಶಿಕ್ಷೆ ಮತ್ತು 500ರೂ ದಂಡ, ದಂಡ ತೆರಲು ತಪ್ಪಿದಲ್ಲಿ 1 ವಾರ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸಬೇಕು,ಭಾ.ದಂ.ಸಂ. ಕಲಂ 354ರಡಿಯ ಅಪರಾಧ ಮತ್ತು ಫೋಕ್ಸೋ ಕಾಯ್ದೆಯ ಅಪರಾಧಕ್ಕೆ 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ಮತ್ತು 20,000 ರೂ.ದಂಡ ವಿಧಿಸಿದ್ದಾರೆ.ದಂಡ ತೆರಲು ತಪ್ಪಿದಲ್ಲಿ ಮತ್ತೆ 6 ತಿಂಗಳ ಕಾರಾಗೃಹ ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top