ಮಂಗಳೂರು: ಕಾಲೇಜಿನಲ್ಲಿ ಆಕಸ್ಮಿಕವಾಗಿ ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳೂರು ಅಲೋಶಿಯಸ್ ಪದವಿ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ಆಶಾ ರೋಡ್ರಿಗಸ್ (23) ಮೃತಪಟ್ಟವರು.
ಬಜೆ ಪಡು ಪೆರಾರ ನಿವಾಸಿ ಗೋರಿಯಾ ಆಶಾ ರೋಡ್ರಿಗಸ್ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿದ್ದರು. ಬಳಿಕ ಅಲೋಶಿಯಸ್ ಕಾಲೇಜಿನಲ್ಲಿಯೇ ಬಿಕಾಂ ಪದವಿಗೆ ಕಾಮರ್ಸ್ ವಿಷಯದಲ್ಲಿ ಉಪನ್ಯಾಸಕಿಯಾಗಿ ಸೇರ್ಪಡೆಗೊಂಡಿದ್ದರು
ನ.9ರಂದು ಕಾಲೇಜಿನಲ್ಲಿ ತಲೆಸುತ್ತು ಬಂದು ಬಿದ್ದ ಅವರಿಗೆ ಗಾಯವಾಗಿತ್ತು. ಅವರನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಡೆಯಲಿದೆ.