ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಾವು ಮಾಡ್ನೂರು ಗ್ರಾಮ ಸಮಿತಿ ವತಿಯಿಂದ ಉಚಿತ ವೈದ್ಯಕೀಯ, ದಂತ ಹಾಗೂ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಕಾವು ಜನಮಂಗಲ ಸಭಾಭವನದಲ್ಲಿ ನಡೆಯಿತು.
ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷ ಮಹೇಂದ್ರ ವರ್ಮ ವಳಾಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅರಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಮಣಿಯಾಣಿ, ಕಾವು ಸರಯೂ ಕ್ಲಿನಿಕ್ ನ ಡಾ.ನವೀನ್ ಶಂಕರ, ಕುಂಬ್ರ ಮಾತೃಶ್ರೀ ಅರ್ಥ್ ಮೂವರ್ಸ್ ನ ಮೋಹನ್ ದಾಸ್ ರೈ, ಈಶ್ವರಮಂಗಲದ ವಕೀಲ ಚಂದ್ರಹಾಸ, ಪುತ್ತಿಲ ಪರಿವಾರದ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ, ಕಾವು ಗೋಪೂಜಾ ಸಮಿತಿ ಅಧ್ಯಕ್ಷ ನಹುಷ ಭಟ್, ಹಿರಿಯ ಕರಸೇವಕ ನಾರಾಯಣ ಆಚಾರ್ಯ ಮಳಿ, ಕಾವು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ರವಿಚಂದ್ರ ಮಾಣಿಯಡ್ಕ, ಪುತ್ತಿಲ ಪರಿವಾರ ಚಾರಿಟೇಬಲ್ ಟ್ರಸ್ಟ್ ಸದಸ್ಯ ಸುನಿಲ್ ಬೋರ್ಕರ್ ಮುಂಡಕೊಚ್ಚಿ, ಕಾವು ಪುತ್ತಿಲ ಪರಿವಾರ ಅಧ್ಯಕ್ಷ ಹರೀಶ್ ಕುಂಜತ್ತಾಯ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಯೇನಪೋಯ ಕಾಲೇಜು ಹಾಗೂ ಮಂಗಳೂರು ಗಾಂಧಿನಗರ ಶ್ರೀ ಸತ್ಯಸಾಯಿ ಸೇವಾ ಸಮಿತಿ ಸಹಕಾರದಲ್ಲಿ ಇಸಿಜಿ, ಬಿಪಿ, ಸಕ್ಕರೆ ಕಾಯಿಲೆ ತಪಾಸಣೆ, ಕಿವಿ, ಮೂಗು, ಗಂಟಲು ತಪಾಸಣೆ, ಕಣ್ಣು ಪರೀಕ್ಷೆ, ಉಚಿತ ಕನ್ನಡಕ ವಿತರಣೆ, ದಂತ ಪರೀಕ್ಷೆ ಹಾಗೂ ಚಿಕಿತ್ಸೆ, ಎಲುಬು, ಚರ್ಮ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಯಿತು.