ಸವಣೂರು: ಪುಣ್ಚಪ್ಪಾಡಿ ಸ. ಹಿ. ಪ್ರಾ. ಶಾಲೆಯ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಸವಣೂರು ಗ್ರಾಮ ಪಂಚಾಯತ್ ಸದಸ್ಯ ಗಿರಿಶಂಕರ ಸುಲಾಯ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣದ ಜೊತೆಗೆ ಕ್ರೀಡೆಗೂ ಪ್ರಾಶಸ್ತ್ಯವನ್ನು ನೀಡುತ್ತಿದ್ದು ದೇಹ ಸಧೃಡವಾಗಿ ಬೆಳೆಯಲು ವ್ಯಾಯಾಮ, ಕ್ರೀಡೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದು ಮುಖ್ಯ ಎಂದರು.
ಸವಣೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಜಯಶ್ರೀ ಕುಚ್ಚೆಜಾಲು, ಸದಸ್ಯ ಬಾಬು ಜರಿನಾರು ಕ್ರೀಡಾ ಜ್ಯೋತಿ ಬೆಳಗಿಸಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು. ವಿದ್ಯಾರ್ಥಿಗಳು ತಮ್ಮ ಕ್ರೀಡಾ ತಂಡಗಳ ಜೊತೆ ಪಥ ಸಂಚಲನವನ್ನು ನಡೆಸಿಕೊಟ್ಟರು.
ಎಸ್ ಡಿ ಎಂ ಸಿ ಅಧ್ಯಕ್ಷ ರಾಧಾಕೃಷ್ಣ ದೇವಸ್ಯ ಅಧ್ಯಕ್ಷತೆ ವಹಿಸಿ, ಸೋಲು ಗೆಲುವಿನ ಮೆಟ್ಟಿಲು. ಎರಡನ್ನೂ ಸಮಾನವಾಗಿ ಸ್ವೀಕರಿಸಿ ಉತ್ತಮ ಪೈಪೋಟಿ ನೀಡುವಂತೆ ಶುಭ ಹಾರೈಸಿದರು.
ವಿದ್ಯಾರ್ಥಿಗಳು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ಪ್ರತ್ಯೇಕವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ ಸರಿತ ತೋಟದಡ್ಕ, ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಶೋಭಾ. ಕೆ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.ಅತಿಥಿ ಶಿಕ್ಷಕಿ ತೃಪ್ತಿ ವಂದಿಸಿದರು. ಶಿಕ್ಷಕಿಯರಾದ ಚಂದ್ರಿಕಾ ಸವಿತಾ. ಬಿ, ಸವಿತಾ ಓಡಂತರ್ಯ ಸಹಕರಿಸಿದರು.