ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ಜಿ.ಎಲ್.ಆಚಾರ್ಯ ಜನ್ಮಶತಮಾನೋತ್ಸವ ಸಮಿತಿ ಜಂಟಿ ಆಶ್ರಯದಲ್ಲಿ ಜಿ.ಎಲ್.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮ ನ.17 ಭಾನುವಾರ ಪುತ್ತೂರು ಬೈಪಾಸ್ ರಸ್ತೆಯ ಅಶ್ಮಿ ಕಂಫರ್ಟ್ಸ್ ನ ಪ್ರಥಮ ಮಹಡಿಯಲ್ಲಿರುವ ಸಭಾಂಗಣದಲ್ಲಿ ಜರಗಲಿದೆ.
ಬೆಳಿಗ್ಗೆ 10 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮೆ.ಜಿ.ಎಲ್.ಆಚಾರ್ಯ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಜಿ.ಎಲ್.ಬಲರಾಮ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಪ್ರದೀಪ ಕುಮಾರ್ ಕಲ್ಕೂರ ಜಿ.ಎಲ್.ಆಚಾರ್ಯ ಶತಮಾನೋತ್ಸವ ಲಾಂಛನ ಬಿಡುಗಡೆ ಮಾಡುವರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಗೌರವ ಉಪಸ್ಥಿತರಿರುವರು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾಧ್ಯಕ್ಷ ಬಿ.ಐತ್ತಪ್ಪ ನಾಯ್ಕ ಕಾರ್ಯಕ್ರಮ ನಿರೂಪಣೆ ಮಾಡುವರು ಎಂದು ಪುತ್ತೂರು ಕರ್ನಾಟಕ ಸಂಘದ ಅಧ್ಯಕ್ಷ ಬಿ.ಪುರಂದರ ಭಟ್, ಹಿರಿಯ ಸಾಹಿತಿಗಳಾದ ಪ್ರೊ.ವಿ.ಬಿ.ಅರ್ತಿಕಜೆ, ಡಾ.ವಸಂತ ಕುಮಾರ್ ತಾಳ್ತಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.