ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆಯೇ ಎನ್ನುವ ಪ್ರಶ್ನೆಯೇ ತಪ್ಪು ಎಂದ ಸಿದ್ದರಾಮಯ್ಯ

ಅನರ್ಹ ಕಾರ್ಡ್‌ಗಳು ಮಾತ್ರ ರದ್ದು ಎಂದು ಸ್ಪಷ್ಟನೆ

ಬೆಂಗಳೂರು : ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ.
ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿವೆಯೇ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಅನರ್ಹರ ಕಾರ್ಡ್‌ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ ಮಾತ್ರ ನಮ್ಮದಾಗಿದೆ. ಈ ಬಗ್ಗೆ ಇನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಪಿಎಲ್‌ ಕಾರ್ಡ್‌ಗಳು ರದ್ದಾಗುತ್ತಿರುವ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಆದಾಯ ತೆರಿಗೆ ಪಾವತಿಸುವವರ ಬಳಿ, ಸರ್ಕಾರಿ ನೌಕರರ ಬಳಿಯೂ ಬಿಪಿಎಲ್ ಕಾರ್ಡ್ ಇರಬೇಕಾ? ಅರ್ಹರ ಯಾವ ಕಾರ್ಡ್‌ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಎಂಬುದಾಗಿ ವಿವಾದದ ಕುರಿತು ಟ್ವೀಟ್‌ ಮಾಡಿದ್ದಾರೆ.
ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರ ಬಿಪಿಎಲ್ ಕಾರ್ಡುಗಳಿದ್ದರೆ ಅವು ರದ್ದಾಗುತ್ತವೆ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಎಂದಿದ್ದಾರೆ.







































 
 

ಸುಮಾರು 11 ಲಕ್ಷ ಬಿಪಿಎಲ್‌ ಕಾರ್ಡ್‌ಗಳು ರದ್ದಾಗುತ್ತಿರುವುದು ಭಾರಿ ವಿವಾದ ಸೃಷ್ಟಿಸಿದೆ. ಗ್ಯಾರಂಟಿ ಕೊಡಲು ಸಾಧ್ಯವಾಗದೆ ಸರಕಾರ ಬಿಪಿಎಲ್‌ ಕಾರ್ಡ್‌ಗಳನ್ನೇ ರದ್ದುಮಾಡಿ ಹೊರೆ ತಗ್ಗಿಸಿಕೊಳ್ಳುತ್ತಿದೆ ಎಂದು ವಿಪಕ್ಷಗಳು ಟೀಕಿಸಿವೆ. ಈ ಕುರಿತಾಗಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top