ನಕ್ಸಲ್‌ ವಿಕ್ರಂ ಗೌಡ ಎನ್‌ಕೌಂಟರ್‌ : ಗೃಹ ಸಚಿವರು ಹೇಳಿದ್ದಿಷ್ಟು

2-3 ನಕ್ಸಲರಿಗೆ ಎನ್‌ಕೌಂಟರ್‌ನಲ್ಲಿ ಗುಂಡೇಟು?

ಬೆಂಗಳೂರು: ವಿಕ್ರಂ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ಪೊಲೀಸರು ಸೋಮವಾರ ಸಂಜೆ ಎನ್‌ಕೌಂಟರ್ ಮಾಡಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಎನ್‌ಕೌಂಟರ್ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ 20 ವರ್ಷಗಳಿಂದ ವಿಕ್ರಂನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ವಿಕ್ರಂ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್‌ಕೌಂಟರ್‌ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ ಎನ್‌ಕೌಂಟರ್ ಮಾಡಿದ್ದಾರೆ. ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರಿದಿದೆ. ವಿಕ್ರಂ ಗೌಡ ಸಕ್ರಿಯನಾಗಿದ್ದ ಎಂದು ಪೊಲೀಸರು ಆತನನ್ನು ಹುಡುಕುತ್ತಿದ್ದರು ಎಂದರು.

ವಿಕ್ರಂ ಗೌಡ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದು, ಆತನ ಮೇಲೆ ನಿಗಾ ಇಟ್ಟಿದ್ದರು. ಈಗ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗಿಯಿತು ಅಂದುಕೊಂಡಿದ್ದೆವು. ಆದರೆ ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದಾರೆ. ಅವರಿಬ್ಬರೂ ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ಕೂಂಬಿಂಗ್ ನಡೆಸಲಾಯಿತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದಂತೆ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತ್ತು. ಆ ಸಂದರ್ಭದಲ್ಲಿ ಪೊಲೀಸರಿಗೆ ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡುವುದು ಅನಿವಾರ್ಯವಾಯಿತು ಎಂದು ತಿಳಿಸಿದರು.
ಪೊಲೀಸರ ಮೇಲೆ ವಿಕ್ರಂ ಗೌಡ ತಂಡ ದಾಳಿ ಮಾಡಿದೆ. ಹಾಗಾಗಿ ಪೊಲೀಸರು ಎನ್‌ಕೌಂಟರ್ ಮಾಡಬೇಕಾಯಿತು. ನಕ್ಸಲರನ್ನು ಮುಖ್ಯವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತನಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಅದು ಇದ್ದಿದ್ದೇ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದರೆ ಈ ಥರ ಘಟನೆ ಆಗೋದು ಸಹಜ ಎಂದು ಹೇಳಿದರು.































 
 

2-3 ನಕ್ಸಲರಿಗೆ ಎನ್‌ಕೌಂಟರ್‌ನಲ್ಲಿ ಗುಂಡೇಟು

ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್‌ ನಿಗ್ರಹ ಪಡೆ ಎನ್‌ಕೌಂಟರ್‌ ಮಾಡಿ ವಿಕ್ರಂ ಗೌಡನನ್ನು ಹತ್ಯೆ ಮಾಡಿದೆ. ಸೋಮವಾರ ಸಂಜೆ ನಡೆದ ಗುಂಡಿನ ಕಾಳಗದಲ್ಲಿ ಎರಡು, ಮೂರು ನಕ್ಸಲರು ಗಾಯಗೊಂಡಿದ್ದು ಅವರಿಗೆ ಅರಣ್ಯದಲ್ಲಿ ಶೋಧ ಕಾರ್ಯ ನಡೆಯುತ್ತಿದೆ ತಿಳಿಸಿದ್ದಾರೆ.

ಯಾರು ಈ ವಿಕ್ರಂ ಗೌಡ?

ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು.
20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿದ್ದ.
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಂ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top