ನಕ್ಸಲ್‌ ನಾಯಕ ವಿಕ್ರಂ ಗೌಡ ಎನ್‌ಕೌಂಟರ್‌ಗೆ ಬಲಿ

ಹೆಬ್ರಿ ಬಳಿ ನಕ್ಸಲ್‌ ತಡರಾತ್ರಿ ಪೊಲೀಸರಿಗೆ ಮುಖಾಮುಖಿಯಾದ ನಕ್ಸಲರು

ಹೆಬ್ರಿ : ಹೆಬ್ರಿಯ ಸೀತಾಬೈಲು ಎಂಬಲ್ಲಿ ನ.18ರ ತಡರಾತ್ರಿ ನಕ್ಸಲ್‌ ನಿಗ್ರಹ ಪಡೆ (ಎಎನ್ಎಫ್) ನಡೆಸಿದ ಎನ್‌ಕೌಂಟರ್‌ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿಯಾಗಿದ್ದಾನೆ.
ಒಂದೂವರೆ ದಶಕದಿಂದ ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿದ್ದ ಹೆಬ್ರಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಪೊಲೀಸರಿಗೆ ತಲೆನೋವಾಗಿದ್ದ. ಅವನನ್ನು ಹಿಡಿಯಲು ಪೊಲೀಸರು ಮತ್ತು ನಕ್ಸಲ್‌ ನಿಗ್ರಹ ಪಡೆಯವರು ಸತತವಾಗಿ ಪ್ರಯತ್ನಿಸುತ್ತಿದ್ದರು. ನಿನ್ನೆ ರಾತ್ರಿ ಹೆಬ್ರಿ ಸಮೀಪ ಸೀತಾಂಬೈಲು ಎಂಬಲ್ಲಿ ಎಎನ್‌ಎಫ್‌ ಪಡೆಗೆ ನಕ್ಸಲರು ಎದುರಾಗಿದ್ದು, ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ವಿಕ್ರಂ ಗೌಡ ಸತ್ತಿದ್ದಾನೆ. ಅವನ ಸಹಚರರು ದಟ್ಟಕಾಡಿನೊಳಗೆ ಓಡಿ ಹೋಗಿ ತಪ್ಪಿಸಿಕೊಂಡಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪಶ್ಚಿಮ ಘಟ್ಟದಲ್ಲಿ ನಕ್ಸಲ್‌ ಚಟುವಟಿಕೆ ಮರಳಿ ಶುರುವಾದ ಕುರಿತು ಕೆಲದಿನಗಳ ಹಿಂದೆಯೇ ಸುಳಿವು ದೊರಕಿತ್ತು. ಕಾರ್ಕಳದ ಈದು ಸಮೀಪ ನಕ್ಸಲರನ್ನು ಕಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೂಂಬಿಂಗ್‌ ಕಾರ್ಯಾಚರಣೆ ಶುರುಮಾಡಲಾಗಿತ್ತು. ಇದಾದ ಬಳಿಕ ಕೊಪ್ಪದ ಬಳಿ ನಕ್ಸಲರು ಕಾಣಿಸಿಕೊಂಡಿದ್ದು, ಅಲ್ಲಿನ ಮನೆಯೊಂದಕ್ಕೂ ಭೇಟಿ ನೀಡಿದ್ದರು. ಬಳಿಕ ಪೊಲೀಸರು ಮತ್ತು ಎನ್‌ಎಫ್‌ ಕಾರ್ಯಾಚರಣೆ ಚುರುಕಾಗಿತ್ತು.































 
 

13 ವರ್ಷಗಳ ಬಳಿಕ ಎನ್​ಕೌಂಟರ್

ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್​ಕೌಂಟರ್​ನೊಂದಿಗೆ ಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್​ಕೌಂಟರ್​​ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.
ನಕ್ಸಲರ ನೇತ್ರಾವತಿ ದಳದ ನಾಯಕ ವಿಕ್ರಂ ಗೌಡ. ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯ ಪ್ರದೇಶದ ಗ್ರಾಮದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಹತನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.
ಇತ್ತೀಚೆಗೆ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.
ನಂತರ ನಕ್ಸಲರ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿದೆ.ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top