ಪುತ್ತೂರು: ಕರ್ನಾಟಕ ಸರಕಾರದ ವತಿಯಿಂದ ಕಾರ್ಮಿಕ ಇಲಾಖೆ ಮೂಲಕ ನವಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಸದಸ್ಯರಿಗೆ ಸುರಕ್ಷತಾ ಕಾರ್ಯಾಗಾರ ಅನುರಾಗ ವಠಾರದಲ್ಲಿ ನಡೆಯಿತು.

ನವಕರ್ನಾಟಕ ಕಟ್ಟಡ ಕಾರ್ಮಿಕ ಸಂಘ ಮತ್ತು ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷ ಬಿ.ಪುರಂದರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ನಮ್ಮ ಸಂಘದ ಸದಸ್ಯರಿಗೆ ಉಪಯುಕ್ತವಾಗುವಂತ ಹಲವಾರು ಮಾಹಿತಿ ಕಾರ್ಯಕ್ರಮಗಳನ್ನು ನಡೆಸಿದ್ದೇವೆ. ಪ್ರಸ್ತುತ ಸರಕಾರದ ವತಿಯಿಂದ ಕಾರ್ಮಿಕ ಇಲಾಖೆ ಮೂಲಕ ಸುರಕ್ಷತಾ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದಾರೆ. ಎಲ್ಲಾ ಕಾರ್ಮಿಕರು ಈ ಮಾಹಿತಿ ಕಾರ್ಯಾಗಾರದ ಮಾಹಿತಿ ಪಡಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಪೂಜಾರಿ ಮುಕ್ವೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಸಲಹೆಗಾರ, ಕರ್ನಾಟಕ ವಿದ್ಯುತ್ ಕಂಬ ಅಳವಡಿಸುವ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಕೆ. ಜಯರಾಮ ಕುಲಾಲ್, ಪ್ರಧಾನ ಕಾರ್ಯದರ್ಶಿ ಮೋಹನ್ ಆಚಾರ್ಯ ಪುರುಷರಕಟ್ಟೆ ಉಪಸ್ಥಿತರಿದ್ದರು. ಕಾರ್ಯಾಗಾರವನ್ನು ಇಜಾಜ್ ಮತ್ತು ಸಮೀರ್ ಬಾಷಾ ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು. ಸಂಘದ ಕಾರ್ಯಧ್ಯಕ್ಷ ಎಮ್.ಶೇಷಪ್ಪ ಕುಲಾಲ್ ವಂದಿಸಿದರು.