ಪುತ್ತೂರು : ಕೇಂದ್ರ ಅಡಿಕೆ ಮತ್ತು ಕೊಕ್ಕೋ ಮಾರಾಟ ಮತ್ತು ಪರಿಷ್ಕರಣ ಸಹಕಾರಿಯ ಪುತ್ತೂರು ಶಾಖೆಯ ನವಿಕೃತ ಕಛೇರಿ ಉದ್ಘಾಟನೆ ಹಾಗೂ ಸದಸ್ಯ ಬೆಳೆಗಾರರ ಸಭೆ ನ.22 ರಂದು ಮಹಮ್ಮಾಯಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಮದ್ಯಾಹ್ನ 3 ಗಂಟೆಗೆ ನಡೆಯುವ ಸಮಾರಂಭವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕಾರಿಣಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಉದ್ಘಾಟಿಸಲಿದ್ದಾರೆ.
ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿಅಧ್ಯಕ್ಷತೆ ವಹಿಸಲಿದ್ದಾರೆ. ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ. ಸತ್ಯನಾರಾಯಣ ಉಪಸ್ಥಿತರಿರುವರು ಎಂದು ಕ್ಯಾಂಪ್ಕೋ ಪ್ರಕಟಣೆಯಲ್ಲಿ ತಿಳಿಸಿದೆ.