ವಿಟ್ಲ: ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿಯ ಮನೆಯೊಂದರಲ್ಲಿ ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಮೌರಿಸ್ ಎಂಬವರ ಮನೆಯಲ್ಲಿ ಕೆಲಸದ ಮಾಡುತ್ತಿದ್ದ ಓರ್ವ ವ್ಯಕ್ತಿ ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.