ಪುತ್ತೂರು : ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 2024ರ ಸಾಲಿನ ವಾರ್ಷಿಕ ಕ್ರೀಡೋತ್ಸವ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.
ಪುತ್ತೂರು ಅರಣ್ಯ ಇಲಾಖೆಯ ಬಿಟ್ ಅಧಿಕಾರಿ ರಾಜುಚಂದ್ರ ಧ್ವಜಾರೋಹಣ ನೆರವೇರಿಸಿದರು. ಮಹಾಲಿಂಗೇಶ್ವರ ದೇವಸ್ಥಾನದಿಂದ ಶಾಲಾ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ತಂದರು.
ಪುತ್ತೂರು ಸಂಚಾರ ಠಾಣೆಯ ಸಬ್ ಇನ್ಸ್ಪೆಕ್ಟರ್ ಕುಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಾರಾಡಿ ಸರಕಾರಿ ಶಾಲೆಯಲ್ಲಿ ಸುಮಾರು 850 ವಿಧ್ಯಾರ್ಥಿಗಳು ಇರುವುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದಲ್ಲದೆ, ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಿ ಭಾರತ ದೇಶವನ್ನು ಕಟ್ಟುವರಂತಾಗಬೇಕೆಂದು ಆಶಯ ವ್ಯಕ್ತಪಡಿಸಿದರು.
ಶಾಲಾ ಮೇಲುಸ್ತುವಾರಿ ಅಧ್ಯಕ್ಷೆ ಸುಲೋಚನಿ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳ ಕ್ರೀಡಾ ಸ್ಪೂರ್ತಿ ಹೆಚ್ಚುವಂತೆ ಪ್ರಾಮಾಣಿಕತೆಯಿಂದ ಸೋಲು ಗೆಲುವಿನ ಬಗ್ಗೆ ಚಿಂತಿಸದೇ ಕ್ರೀಡಾ ಸ್ಪೂರ್ತಿಯಿಂದ ಆಟವಾಡಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ sdmc ಉಪಾಧ್ಯಕ್ಷ ಇಸ್ಮಾಯಿಲ್, ಸದಸ್ಯರುಗಳು, ಶಾಲಾ ಮಕ್ಕಳ ಪೋಷಕರು, ಶಾಲಾ ಅಧ್ಯಾಪಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಕೆಕೆ ಮಾಸ್ಟರ್ ಸ್ವಾಗತಿಸಿ, ಶಾಲಾ ಶಿಕ್ಷಕಿ ಶುಭಲತಾ ವಂದಿಸಿದರು . ಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿದರು.