ಎರಡು ತಿಂಗಳ ಹಿಂದೆಯಷ್ಟೇ ವರ್ಗಾವಣೆಯಾಗಿದ್ದ ಬಂದಿದ್ದ ಅಧಿಕಾರಿಯ ಮನೆಗೆ ದಾಳಿ
ಮಂಗಳೂರು: ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಅದರಂತೆ ಮಂಗಳೂರಿನಲ್ಲಿ ಓರ್ವ ಅಧಿಕಾರಿಯ ಮನೆ ಮೇಲೂ ದಾಳಿಯಾಗಿದೆ.
ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಬೆಳಗ್ಗೆ ದಾಳಿ ನಡೆಸಿ ಶಾಕ್ ನೀಡಲಾಗಿದ್ದು, ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಲೋಕಾಯುಕ್ತ ಎಸ್‌ಪಿ ನಟರಾಜ್ ನೇತೃತ್ವದಲ್ಲಿ ಏಕಕಾಲದಲ್ಲಿ ಅಧಿಕಾರಿಗಳ ತಂಡ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿದೆ.
ಎರಡು ತಿಂಗಳ ಹಿಂದೆಯಷ್ಟೇ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದ ಕೃಷ್ಣವೇಣಿ ವೆಲೆನ್ಸಿಯಾದಲ್ಲಿರುವ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದಾರೆ. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ.