ಸವಣೂರು :ಒಕ್ಕಲಿಗ ಸ್ವಸಹಾಯ ಟ್ರಸ್ಟ್ ದಶಮಾನೋತ್ಸವ ಸಂಭ್ರಮದ ಅಂಗವಾಗಿ ತಾಲೂಕಿನ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಸಮುದಾಯದವರಿಗೆ ಸನ್ಮಾನ ಕಾರ್ಯಕ್ರಮ ನಡೆಸುತ್ತಾ ಬಂದಿದೆ.

ಇಂದು ಸವಣೂರು ಗ್ರಾಮ ಒಕ್ಕೂಟದ ನಾಲ್ಕು ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಸವಣೂರು ಯುವ ಸಭಾಭವನದಲ್ಲಿ ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ದಶಮಾನೋತ್ಸವ ಸಮಿತಿ ಅಧ್ಯಕ್ಷ ಪಟೇಲ್ ಗೋಪಾಲಕೃಷ್ಣ ಗೌಡ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ ಗೌಡ, ಉಪಾಧ್ಯಕ್ಷ ಪ್ರವೀಣ್ ಕುಂಟ್ಯಾನ, ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ, ಮಾಜಿ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸವಣೂರು ಅಧ್ಯಕ್ಷೆ ಅನಿತಾ ಲಕ್ಷ್ಮಣ ಗೌಡ, ಒಕ್ಕಲಿಗ ಗೌಡ ಸೇವಾ ಸಂಘದ ಸವಣೂರು ಗ್ರಾಮ ಸಮಿತಿ ಅಧ್ಯಕ್ಷ ರಾಘವ ಗೌಡ ಉಪಸ್ಥಿತರಿದ್ದರು.