ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24” ವಿವಿಧ ಸ್ಪರ್ಧೆಗಳು ನಡೆಯಿತು. ಈ ಸ್ಪರ್ದೆಯಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಶುಭ ಹಾರೈಸಿದರು.
MIT ಮೂಡಬಿದ್ರೆಯ ಎಂಸಿಎ ವಿಭಾಗದ ಅಸಿಸ್ಟೆಂಟ್ ಪ್ರೊಸೆಸರ್ ರಾಜೇಶ್ ರಾಜು ಅತಿಥಿಯಾಗಿ ಮಾತನಾಡಿ, ಈ ರೀತಿಯ ಫೆಸ್ಟ್ ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಹಲವು ವಿಷಯಗಳನ್ನು ತಿಳಿದುಕೊಳ್ಳುವುದರ ಜೊತೆಗೆ ಕಲಿತ ವಿಷಯವನ್ನು ಹೇಗೆ ಮತ್ತು ಎಲ್ಲಿ ಅಳವಡಿಸಿಕೊಳ್ಳಬಹುದು ಎಂಬುದನ್ನು ಅರಿತುಕೊಳ್ಳಲು ಸಾಧ್ಯ ಎಂದರು.
ಕಾರ್ಯಕ್ರಮ ಸಂಘಟಕಿ, ಬಿಸಿಎ ವಿಭಾಗದ ಮುಖ್ಯಸ್ಥೆ ಪ್ರತಿಭಾ ಭಟ್ ಅತಿಥಿ ಪರಿಚಯ ಮಾಡಿದರು.
ಸಂಸ್ಥೆಯ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ ಕೆ. ಮಾತನಾಡಿ, ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ಕೊಡುವ ಸಂಸ್ಥೆ ನಮ್ಮದಾಗಿದ್ದು ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಸಂಸ್ಥೆಯ ಉಪಪ್ರಾಂಶುಪಾಲ ಶೇಷಗಿರಿ ಎಂ., ವಿದ್ಯಾರಶ್ಮಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಆಳ್ವ, ವಿದ್ಯಾರ್ಥಿ ಸಂಘಟಕ ಆಸ್ಮಿತ್ ಉಪಸ್ತಿತರಿದ್ದರು.
ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಕುಷಿತಾ ಸ್ವಾಗತಿಸಿ, ಪ್ರಥಮ ಬಿ. ಸಿ.ಎ. ವಿದ್ಯಾರ್ಥಿನಿ ಸಫ್ರೀನಾ ವಂದಿಸಿದರು. ಮಹಮ್ಮದ್ ಸುಫೈದ್ ಕಾರ್ಯಕ್ರಮ ನಿರೂಪಿಸಿದರು.