ಗುಂಡ್ಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 20 ಕ್ಕೂ ಅಧಿಕ ಮಂದಿಗೆ ಗಾಯ

ಪುತ್ತೂರು: ಸರಕಾರಿ ಬಸ್, ಖಾಸಗಿ ಬಸ್ ಹಾಗೂ ಕಾರಿನ ನಡುವೆ ನಡೆದ ಸರಣಿ ಅಪಘಾತದಲ್ಲಿ 20 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.

ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ.

ಈ ಸಂದರ್ಭ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top