ಚುನಾವಣೆ ಫಲಿತಾಂಶ : ಆರಂಭಿಕ ಸುತ್ತಿನಲ್ಲಿ ಎನ್‌ಡಿಎಗೆ ಮುನ್ನಡೆ

ಎರಡೂ ರಾಜ್ಯಗಳಲ್ಲಿ ತೀವ್ರ ಹಣಾಹಣಿಯ ಸಾಧ್ಯತೆ ಗೋಚರ

ಮುಂಬಯಿ: ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ, ಮೂರು ಲೋಕಸಭಾ ಕ್ಷೇತ್ರಗಳ ಚುನಾವಣೆ ಮತ್ತು 30ಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭದ ಸುತ್ತಿನಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಅಲ್ಪ ಮುನ್ನಡೆ ಸಿಕ್ಕಿದೆ.

ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆಯೂ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಅಂಚೆ ಮತಗಳಲ್ಲಿ ಎನ್‌ಡಿಎ 84 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಮಹಾವಿಕಾಸ್‌ ಅಘಾಡಿ 61 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇತರರು 5 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.































 
 

ಒಟ್ಟು 288 ಕ್ಷೇತ್ರಗಳು ಮಹಾರಾಷ್ಟ್ರದಲ್ಲಿದ್ದು ಸರಳ ಬಹುಮತಕ್ಕೆ 145 ಸ್ಥಾನಗಳ ಅಗತ್ಯವಿದೆ. ಈ ಬಾರಿ ಶೇ.62.05 ಮತದಾನ ನಡೆದಿದೆ.ಬಿಜೆಪಿ ನೇತೃತ್‌ವದ ಮಹಾಯುತಿ 91 ಮತ್ತು ಕಾಂಗ್ರೆಸ್‌ ನೇತೃತ್ವದ ಆಘಾಡಿ 50 ಕ್ಷೇತ್ರಗಳಖಲ್ಲಿ ಮುನ್ನಡೆಯಲ್ಲಿದೆ.

ಮಹಾರಾಷ್ಟ್ರದಲ್ಲಿ ಮಹಾಯುತಿ ಸರ್ಕಾರವೇ ಮತ್ತೆ ಬರಲಿದೆ ಎಂದು ಎಕ್ಸಿಟ್ ಪೋಲ್‌ಗಳು ಹೇಳ್ತಿವೆ. ಆದರೆ, ಕಾಂಗ್ರೆಸ್ ಇದನ್ನು ನಂಬುತ್ತಿಲ್ಲ. ತೀವ್ರ ಹಣಾಹಣಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.
ಜಾರ್ಖಂಡ್‌ನಲ್ಲಿ ಬಿಜೆಪಿ 32 ಮತ್ತು ಕಾಂಗ್ರೆಸ್‌ 26 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದ್ದು, ಇಲ್ಲಿ ಕೂಡ ತುರುಸಿನ ಸ್ಪರ್ಧೆಯ ಸಾಧ್ಯತೆ ಗೋಚರಿಸುತ್ತಿದೆ. 81 ಕ್ಷೇತ್ರಗಳಿರುವ ಜಾರ್ಖಂಡ್‌ನಲ್ಲಿ ಬುಉಮತಕ್ಕೆ 41 ಸ್ಥಾನಗಳ ಅಗತ್ಯವಿದೆ.

ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಪ್ರಿಯಾಂಕ ಗಾಂಧಿಯ ಮೊದಲ ಚುನಾವಣೆ ಎಂಬ ಕಾರಣಕ್ಕೆ ಈ ಕ್ಷೇತ್ರ ತುಸು ಗಮನ ಸೆಳೆದಿದೆ. ಆರಂಭಿಕ ಸುತ್ತಿನಲ್ಲಿ ಅವರು 2,750 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top