ಉಳ್ಳಾಲ: ಸಮುದ್ರಕ್ಕೆ ಹಾರಿದ ವಿದ್ಯಾರ್ಥಿನಿಯನ್ನು ಈಜುಗಾರರು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ಸೋಮೇಶ್ವರದ ರುದ್ರಬಂಡೆಯಿಂದ ಸಮುದ್ರಕ್ಕೆ ಹಾರಿದ ವಿದ್ಯಾರ್ಥಿನಿಯನ್ನು ಗಮನಿಸಿದ ಸ್ಥಳೀಯ ಮೀನುಗಾರರು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿ ಬಳಸಿ ರಕ್ಷಿಸಿದ್ದಾರೆ.
ಉಳ್ಳಾಲ ಸಮೀಪ ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿದ್ದಾಳೆ. ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.