ಮಂಗಳೂರು : ದ.ಕ. ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ ಅವರನ್ನು ದೆಹಲಿಯಲ್ಲಿ ಶನಿವಾರ ಭೇಟಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಇಂಡಿಯನ್ ಕೋಸ್ಟ್ ಗಾರ್ಡ್ ಅಕಾಡೆಮಿ ನಿರ್ಮಾಣ ಪ್ರಕ್ರಿಯೆಗೆ ವೇಗ ನೀಡುವುದು, ಕೊಂಕಣ ರೈಲ್ವೆಯ ವಿಲೀನ, ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ), ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಯ ಸ್ಥಾಪನೆ ಕುರಿತು ಮನವಿ ಮಾಡಿದರು.
ಕೊಂಕಣ ರೈಲ್ವೆಯ ವಿಲೀನ, ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ), ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆಯ ಸ್ಥಾಪನೆ ಪ್ರಮುಖವಾಗಿದೆ.