ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ನ. 27ರಂದು ನಾಯಕತ್ವ ತರಬೇತಿ ಕಾರ್ಯಗಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ವಹಿಸಿದ್ದರು. ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯ ಇಂಗ್ಲೀಷ್ ಉಪನ್ಯಾಸಕ ಶೀನಾ ನಾಡೋಳಿ ಅವರು ವಿವಿಧ ಚಟುವಟಿಕೆಯ ಮೂಲಕ ನಾಯಕತ್ವದ ಬಗ್ಗೆ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ತಿನ ಸಂಯೋಜಕ ಡಾ. ಪ್ರಸಾದ ಎನ್ ಸಹ ಸಂಯೋಜಕರಾದ ಶಿವಪ್ರಸಾದ ಎಸ್,ಅಶ್ವಿನಿ ಎಸ್ ಎನ್ ಹಾಗೂ ವಿದ್ಯಾರ್ಥಿ ಪರಿಷತ್ತಿನ ನಾಯಕರಾದ ದಿಶಾಂತ್, ಕಾರ್ತಿಕ್ , ಕಲ್ಪನಾ ಉಪಸ್ಥಿತರಿದ್ದರು.
ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ದಿಶಾಂತ್ ಸ್ವಾಗತಿಸಿ, ದೀಕ್ಷಾ ವಂದಿಸಿದರು. ವಿದ್ಯಾರ್ಥಿ ಪರಿಷತ್ತಿನ ಉಪಾಧ್ಯಕ್ಷೆ ಕಲ್ಪನಾ ನಿರೂಪಿಸಿದರು.