ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.30 ಶನಿವಾರ ನಡೆಯುವ ಲಕ್ಷದೀಪೋತ್ಸವದ ಅಂಗವಾಗಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
ವಿವಿಧ ಸಂಘ ಸಂಸ್ಥೆಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ದೇವಸ್ಥಾನದ ರಥಬೀದಿ ಸಹಿತ ಸುತ್ತಮುತ್ತಲಲ್ಲಿ ಬಿದ್ದಿರುವ ಪ್ಲಾಸ್ಟಿಕ್, ಇನ್ನುಇನ್ನಿತರ ಕಡಕಡ್ಡಿಗಳನ್ನು ತೆರವುಗೊಳಿಸಿ ಸ್ವಚ್ಛತೆಗೊಳಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಬಜರಂಗದಳದ ಮುರಳೀಕೃಷ್ಣ ಹಸಂತಡ್ಕ, ಕೃಷ್ಣಪ್ರಸಾದ್ ಮುಳಿಯ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.