ಬೆಳಗಾವಿ: ಯುವಕನೊಬ್ಬನಿಗೆ ಚಾಕು ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಹಾಡುಹಗಲೇ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಸೋಹಿಲ್ ಅಹ್ಮದ್ ಕಿತ್ತೂರು (17) ಚಾಕು ಇರಿತದಿಂದ ಹತ್ಯೆಯಾದವ.
ಸೋಹಿಲ್ ಗ್ರಾಮದಲ್ಲಿ ಎಗ್ ರೈಸ್ ಅಂಗಡಿ ಇಟ್ಟುಕೊಂಡಿದ್ದು, ಆತನನ್ನು ಐದು ಮಂದಿಯ ತಂಡ ಹತ್ಯೆಗೈದಿದ್ದಾರೆ ಎಂದು ಶಂಕಿಸಲಾಗಿದೆ. ಈ ಹಿಂದೆ ಕೆಲವು ಯುವಕರಿಂದ ಮೃತನಿಗೆ ಕೊಲೆ ಬೆದರಿಕೆ ಬಂದಿತ್ತು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುರಗೋಡು ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವಕನ ಹತ್ಯೆ ಖಂಡಿಸಿ ಮುರಗೋಡ ಪೊಲೀಸ್ ಠಾಣೆ ಮುಂದೆ ಯುವಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.