ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ತಿ | ನಾಳೆ (ಡಿ.2) : ನೆಕ್ಕಿಲಾಡಿಯ ಆದರ್ಶ ನಗರದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿ ೭೫ರಲ್ಲಿರುವ ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳನ್ನು ಸಂಪರ್ಕಿಸುವ ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ನಾದುರಸ್ಥಿಯಾಗಿ ವಾಹಗಳ ಸುಗಮ ಸಂಚಾರಕ್ಕೆ ಬಹಳಷ್ಟು ಅಡ್ಡಿಯಾಗಿದ್ದು, ಈ ಹಿನ್ನಲೆಯಲ್ಲಿ ಬಿಜೆಪಿ ಡಿ.೨ರ ಬೆಳಗ್ಗೆ ೧೦ ಗಂಟೆಗೆ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರ ಎಂಬಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮತ್ತು ಲೋಕೋಪಯೋಗಿ ಇಲಾಖೆಗೆ ಬಿಸಿ ಮುಟ್ಟಿಸುವ ಕಾರ್ಯ ನಡೆಸಲಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಪುತ್ತೂರು-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಜನ ಸಾಮಾನ್ಯರು ನಡೆದಾಡಲೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಲೋಕೋಪಯೋಗಿ ಇಲಾಖೆಯಾಗಲಿ, ಸರಕಾರವಾಗಲಿ ಈ ಕುರಿತು ಗಮನ ಹರಿಸದೆ ಇದ್ದ ಕಾರಣ ರಸ್ತೆಯ ಪರಿಸ್ಥಿತಿ ಶೋಚನೀಯವಾಗಿದೆ. ಇದರ ವಿರುದ್ಧ ಸಾರ್ವಜನಿಕರು ರಸ್ತೆಗಿಳಿದು ಹೋರಾಟ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ನಿಟ್ಟಿನಲ್ಲಿ ಪುತ್ತೂರು-ಉಪ್ಪಿನಂಗಡಿ ರಸ್ತೆಗೆ ತಕ್ಷಣವೇ ಡಾಮರೀಕರಣ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು.  ಈ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆಯಲ್ಲಿ ವಾಹನಗಳ ಚಾಲಕ-ಮಾಲಕರು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಕೈಜೋಡಿಸಬೇಕು. ಮಾತ್ರವಲ್ಲದೆ, ಈ ಮೂಲಕ ಪುತ್ತೂರು-ಉಪ್ಪಿನಂಗಡಿ ರಸ್ತೆಯನ್ನು ಸರ್ವಋತು ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ಆಗ್ರಹಿಸಬೇಕು ಎಂದು ಅವರು ವಿನಂತಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top