ಬಲೂನು ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಕಾರವಾರ: ಬಲೂನು ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಮೃತಪಟ್ಟ ಘಟನೆ ಉತ್ತನರ ಕನ್ನಡದ ಹಳಿಯಾಳ ಎಂಬಲ್ಲಿ ಸಂಭವಿಸಿದೆ.

ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದ ನವೀನ ನಾರಾಯಣ ಬೆಳಗಾಂವಕರ್ (13) ಎಂಬ ವಿದ್ಯಾರ್ಥಿ ಮನೆಯಲ್ಲಿ ಆಟವಾಡುವಾಗುವಾಗ ಬಾಯಿಯಿಂದ ಬಲೂನು ಊದಿದ್ದು, ಆದರೆ ಈ ಬಲೂನು ಬಾಯಿಯೊಳಗೆ ಹೋಗಿ ಗಂಟಲಲ್ಲಿ ಸಿಲುಕಿತ್ತು.

ಉಸಿರುಗಟ್ಟಿ ಒದ್ದಾಡುತಿದ್ದ ಈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೆ ಕೊನೆಯುಸಿರೆಳೆದಿದ್ದಾನೆ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top