ಪುತ್ತೂರು: ಕೆಲಸಕ್ಕೆಂದು ಮನೆಯಿಂದ ಹೊರಹೋದ ಯುವಕನೋರ್ವ ನಾಪತ್ತೆಯಾದ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾದವರು.
ಸಂದೀಪ್ ಮರ್ದಾಳದಲ್ಲಿ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದು ನ. 27 ರಂದು ಬೆಳಿಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದವನು ಮನೆಗೆ ವಾಪಾಸಾಗಿರಲಿಲ್ಲ.
ಈ ಬಗ್ಗೆ ವಿನಯ ಅವರಲ್ಲಿ ಸಂದೀಪ್‌ನ ತಾಯಿ ಸರೋಜ ವಿಚಾರಿಸಿದಾಗ ಸಂದೀಪ್ ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಕಾರಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ. ಸಂದೀಪ್ ಆ ದಿನ ಮನೆಗೆ ಬಾರದೇ ಇದ್ದ ಹಿನ್ನಲೆಯಲ್ಲಿ ಸರೋಜ ಅವರು ಕಡಬ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.