ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಕೌಶಲ್ ಮೀಡಿಯಾ ವತಿಯಿಂದ ಕೊಡುಗೆಯಾಗಿ ನೀಡಿದ ಸುಸಜ್ಜಿತ ಬಸ್ ತಂಗುದಾಣದ ಲೋಕಾರ್ಪಣೆ ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಎಂಬಲ್ಲಿ ಗುರುವಾರ ನಡೆಯಿತು.

ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನ ಮುಖ್ಯಸ್ಥ ಜಿ..ಎಲ್.ಬಲರಾಮ ಆಚಾರ್ಯ ತಂಗುದಾಣವನ್ನು ದೀಪ ಬೆಳಗಿಸಿ ಲೋಕಾರ್ಪಣೆಗೊಳಿಸಿ ಮಾತನಾಡಿ, ಕಕ್ಕೂರು ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇದೀಗ ಬಸ್ ತಂಗುದಾಣವನ್ನು ಕೌಶಲ್ ಮೀಡಯಾ ಜತೆಗೂಡಿ ನಿರ್ಮಿಸಲಾಗಿದೆ. ಇದು ಆ ಭಾಗದ ಜನತೆಯ ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದೀಗ ಉದ್ಘಾಟನೆಗೊಂಡ ತಂಗುದಾಣ ಉತ್ತಮ ರೀತಿಯಲ್ಲಿ ಉಪಯೋಗವಾಗುವಂತೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಊರ ನಾಗರಿಕರು ಉಪಸ್ಥಿತರಿದ್ದರು.