ಪುತ್ತೂರು: ಶಾಂತಿಗೋಡು ಗ್ರಾಮದ ಯುವಕೋರ್ವ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಶಾಂತಿಗೋಡು ಗ್ರಾಮದ ರೋಶನ್ ಎಂಬಾತ ಕಿರುಕುಳ ನೀಡಿದ ಆರೋಪಿ.
ವಿದ್ಯಾರ್ಥಿನಿ ನೀಡಿದ ದೂರಿನಂತೆ ಆತನ ವಿರುದ್ಧ ಪೋಕ್ಸೋ ಪ್ರಕರಣ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.