ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಡಿ.7 ಶನಿವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ.6 ಶುಕ್ರವಾರ ಬೆಳಿಗ್ಗೆ 10 ರಿಂದ ಪಂಚಾಮೃತಾಭಿಷೇಕ, ಕಲಶಾಭಿಷೇಕ, ಮಧ್ಯಾಹ್ನ 12 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 3 ಕ್ಕೆ ಶ್ರೀಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು. ಸಂಜೆ 6 ರಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಹಾಗೂ ಊರವರಿಂದ ಭಜನೆ ನಡೆಯಲಿದೆ. ರಾತ್ರ 8ಕ್ಕೆ ಮಹಾಪೂಜೆ ಜರಗಲಿದೆ.
ಡಿ.7 ಶನಿವಾರ ಬೆಳಿಗ್ಗೆ 8 ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ದೇವರಿಗೆ ಕಲಶಪೂಜೆ, ಕಲಶಾಭಿಷೇಕ, ಮಧ್ಯಾಹ್ನ 12 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 7.30 ಕ್ಕೆ ಮಹಾಪೂಜೆ, 8 ರಿಂದ ಶ್ರೀ ದೇವರ ಬಲಿ ಹೊರಟು, ಶ್ರೀ ಭೂತಬಲಿ ಮಹೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ದೇವರ ಬಲಿ ಒಳಗಾಗಿ ವೈದಿಕ ಮಂತ್ರಾಕ್ಷತೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.