ಪುತ್ತೂರು: ಅರಿಯಡ್ಕ ಗ್ರಾಮದ ಕೌಡಿಚ್ಚಾರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಅಯ್ಯಪ್ಪ ಸೇವಾ ಸಮಿತಿ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರದ ಹಿರಿತನದಲ್ಲಿ ಡಿ.20-ಡಿ.21ರಂದು ನಡೆಯಲಿರುವ ಶ್ರೀ ಅಯ್ಯಪ್ಪ ದೀಪೋತ್ಸವದ ಆಮಂತ್ರಣ ಭಾನುವಾರ ಶ್ರೀ ಕೌಡಿಚ್ಚಾರು ಶ್ರೀ ಕೃಷ್ಣ ಸಭಾಭವನದಲ್ಲಿ ಬಿಡುಗಡೆಗೊಂಡಿತು.
ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಗೌರವಾಧ್ಯಕ್ಷ ವಾಸು ಪೂಜಾರಿ ಗುಂಡ್ಯಡ್ಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ, ,ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಈ ಬಾರಿ ಅಯ್ಯಪ್ಪ ದೀಪೋತ್ಸವ ನಡೆಯುತ್ತಿರುವುದು ಸಂತಸದ ವಿಚಾರ.ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
ಭಜನಾ ಸಂಕೀರ್ತನಾ ಸಮಿತಿ ಗೌರಾವಧ್ಯಕ್ಷ ಸದಾಶಿವ ಮಣಿಯಾಣಿ ಕುತ್ಯಾಡಿ ಮಾತನಾಡಿ, ಬಾಬು ಗುರುಸ್ವಾಮಿ ಎರ್ಕ ಅವರು ಕೆಲ ಸಮಯದ ಹಿಂದೆ ದೈವಾಧೀನರಾಗಿದ್ದು, ಅವರಿಗೆ ಅಯ್ಯಪ್ಪ ದೀಪೋತ್ಸವ ಮಾಡಬೇಕೆಂಬ ಸಂಕಲ್ಪ ಮಾಡಿದ್ದರು.ಇದೀಗ ಅವರ ಬಯಕೆಯನ್ನು ಅವರ ಶಿಷ್ಯಂದಿರು ಊರ ಭಕ್ತರ ,ದಾನಿಗಳ ಸಹಕಾರದಿಂದ ಮಾಡಲು ಮುಂದಾಗಿರುವುದು ಗುರುವಿಗೆ ನೀಡುವ ಕಾಣಿಕೆ ಎಂದು ಬಯಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಅಯ್ಯಪ್ಪ ಸೇವಾ ಸಮಿತಿ ಗೌರವ ಸಲಹೆಗಾರ ತಿಲಕ್ ರೈ ಕುತ್ಯಾಡಿ, ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಲಾಲ್ , ಅಯ್ಯಪ್ಪ ಸೇವಾ ಸಮಿತಿಯ ಉಪಾಧ್ಯಕ್ಷ ಬಾಬು ಗುರುಸ್ವಾಮಿ ಕಲ್ಲಡ್ಕ, ಕೋಶಾಧಿಕಾರಿ ದೇವಿಪ್ರಸಾದ್ ಕೆಮನಡ್ಕ, ಪೆರಿಗೇರಿ ಅಯ್ಯಪ್ಪ ಭಜನಾ ಮಂದಿರದ ಗುರುಸ್ವಾಮಿ ಮೋಹನ್ ಹಾಗೂ ಅಯ್ಯಪ್ಪ ಸೇವಾ ಸಮಿತಿ,ಕೃಷ್ಣ ಭಜನಾ ಮಂದಿರದ ಸದಸ್ಯರು, ಅಯ್ಯಪ್ಪ ವೃತದಾರಿಗಳು ಉಪಸ್ಥಿತರಿದ್ದರು.
ಅಯ್ಯಪ್ಪ ಸೇವಾ ಸಮಿತಿ ಅಧ್ಯಕ್ಷ ಬಾಬು ಮಾಸ್ತರ್ ತೆಗ್ಗು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ ವಂದಿಸಿದರು.