ಇಂದಿನಿಂದ ಚಳಿಗಾಲದ ಅಧಿವೇಶನ : ವಿಪಕ್ಷದ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರ

ಮೊದಲ ದಿನವೇ ಕೋಲಾಹಲದ ನಿರೀಕ್ಷೆ

ಬೆಳಗಾವಿ: ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಹುಮ್ಮಸ್ಸಿನಲ್ಲಿರುವ ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಸಿದ್ದಗೊಂಡಿವೆ. ಮುಡಾ, ವಾಲ್ಮೀಕಿ ನಿಗಮ, ವಕ್ಫ್‌ನಿಂದ ರೈತರ ಭೂ ಕಬಳಿಕೆ ವಿವಾದ, ಬಾಣಂತಿಯರ ಸಾವು ಪ್ರಕರಣ ಹೀಗೆ ಹಲವು ಅಸ್ತ್ರಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಮೇಲೆ ಮುಗಿಬೀಳಲು ವಿರೋಧ ಪಕ್ಷದವರು ಸಜ್ಜಾಗಿದ್ದಾರೆ.

ಬಿಜೆಪಿ ಅಸ್ತ್ರಗಳಿಗೆ ಕಾಂಗ್ರೆಸ್ ಕೊರೊನ ಅಸ್ತ್ರ ಜೊತೆಗೆ ಯತ್ನಾಳ್ ಬಣ ಬಡಿದಾಟವನ್ನು ತಿರುಗುಬಾಣವಾಗಿ ಬಿಡಲು ಸಜ್ಜಾಗಿದೆ. ಬಿಜೆಪಿ ವಕ್ಫ್ ವಿಚಾರ ಮುಂದಿಟ್ರೆ, ಯತ್ನಾಳ್ ಪ್ರತ್ಯೇಕ ಹೋರಾಟವನ್ನೇ ಪ್ರಸ್ತಾಪಿಸಿ ತಿವಿಯಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದೆ.































 
 

10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮುಡಾ, ವಾಲ್ಮೀಕಿ, ಅಬಕಾರಿ, ವಕ್ಫ್, ಬಾಣಂತಿಯರ ಸಾವು ಪ್ರಕರಣಗಳು ಸರ್ಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಸಾಲು ಸಾಲು ಅಸ್ತ್ರಗಳನ್ನ ರೆಡಿ ಮಾಡಿಕೊಂಡಿರುವ ವಿಪಕ್ಷಗಳು ಸರ್ಕಾರದ ಮೇಲೆ ಮುಗಿ ಬೀಳಲು ಸಜ್ಜಾಗಿವೆ. ಇತ್ತ ವಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವೂ ಸನ್ನದ್ಧವಾಗಿದೆ. ವಿಪಕ್ಷಗಳ ಹಗರಣಗಳನ್ನು ಮುಂದಿಟ್ಟುಕೊಂಡು ಸರ್ಕಾರ ಕೌಂಟರ್ ನೀಡಲು ತಯಾರಾಗಿದೆ.

ಸದನದ ಒಳಗೆ ಆಡಳಿತ ವಿಪಕ್ಷಗಳ ವಾಗ್ಯುದ್ಧ ಒಂದು ಕಡೆಯಾದರೆ ಸದನದ ಹೊರಗಡೆಯೂ ಸಮರ ಜೋರಾಗಿರಲಿದೆ. ಪಂಚಮಸಾಲಿ 2ಎ ಮೀಸಲಾತಿ ಹೋರಾಟ, ಅನ್ನದಾತರ ಪ್ರತಿಭಟನೆ ಕೂಡ ನಡೆಯುತ್ತಿದೆ. ಅಧಿವೇಶನದಲ್ಲಿ ಬಿಬಿಎಂಪಿ ವಿಧೇಯಕ, ರಾಜ್ಯಪಾಲರ ಅಧಿಕಾರ ಮೊಟಕು ಮಾಡುವ ಗ್ರಾಮೀಣಾಭಿವೃದ್ಧಿ ವಿವಿ ವಿಧೇಯಕ ಸೇರಿ 15ಕ್ಕೂ ಹೆಚ್ಚು ಮಸೂದೆಗಳು ಮಂಡನೆ ಆಗಲಿವೆ. ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ವಿಜಯೇಂದ್ರ, ಸದನದ ಒಳಗೆ, ಹೊರಗೆ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದಿದ್ದಾರೆ. ವಿಪಕ್ಷಗಳು ಅಸ್ತ್ರಗಳನ್ನು ಎದುರಿಸಲು ನಾವು ರೆಡಿ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top