ಉದ್ಯೋಗದ ನೆಪದಲ್ಲಿ ಯುವತಿಗೆ ಕಿರುಕುಳ | ಪಿಡಬ್ಲ್ಯೂಡಿ ಇಂಜಿನಿಯರ್ ಗೆ ಚಪ್ಪಲಿಯಿಂದ ಏಟು

ಮಧ್ಯಪ್ರದೇಶ: ಉದ್ಯೋಗ ಕೊಡಿಸುವುದಾಗಿ ಪಿಡಬ್ಲ್ಯೂಡಿ ಸಬ್‌ ಇಂಜಿನಿಯರ್‌ ಯುವತಿಯನ್ನು ವಿಶ್ರಾಂತಿ ಕೊಠಡಿಗೆ ಕರೆಸಿಕೊಂಡು ಕಿರುಕುಳ ನೀಡಿದ ಘಟನೆ  ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿನಡೆದಿದೆ.

ಕೆಲಸ ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಎಂದು ಆತನ ನಿಜಾಂಶ ತಿಳಿದು ಚಪ್ಪಲಿಯಿಂದ ಹಿಗ್ಗಾಮುಗ್ಗವಾಗಿ ಭಾರಿಸಿದ್ದಾಳೆ. ಈ ಘಟನೆಯ ವೀಡಿಯೋ ಸೋಷಿಯಲ್‍ ಮೀಡಿಯಾದಲ್ಲಿ ಬಾರಿ ವೈರಲ್‍ ಆಗಿದ್ದು, ಈಕೆಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ.

ಭಾನುವಾರ ಈ ಘಟನೆ ನಡೆದಿದ್ದು, ದಾಬ್ರಾದಲ್ಲಿ ಸಬ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ರಾಮ್ ಸ್ವರೂಪ್ ಕುಶ್ವಾಹ ಎಂದು ತಿಳಿದು ಬಂದಿದೆ.































 
 

ಈ ಘಟನೆಯ ಬಗ್ಗೆ ಯುವತಿ ಯಾವುದೇ ದೂರನ್ನು ದಾಖಲಿಸಿಲ್ಲ. ದೂರು ಸ್ವೀಕರಿಸಿದ ನಂತರ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಾಬ್ರಾ ಎಸ್‌ಡಿಒಪಿ ವಿವೇಕ್ ಶರ್ಮಾ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top