ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಎಕ್ಸ್‌ನಲ್ಲಿ ಶೋಕ ಸಂದೇಶ ಫೋಸ್ಟ್ ಮಾಡಿದ ಸಿದ್ದರಾಮಯ್ಯ, ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅಜಾತಶತ್ರುವಾದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಸದಾ ನನ್ನ ಹಿತೈಷಿಗಳಾಗಿದ್ದರು.
ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಹೇಳಿದ್ದಾರೆ.
























