ಮಂಗಳೂರು: ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವಾಮಂಜೂರು ತಿರುವೈಲು ಮೂಡುಜೆಪ್ಪು ಅಮೃತೇಶ್ವರ ದೇವಸ್ಥಾನದ ಬಳಿಯ ನಿವಾಸಿ ನದೀಂ(34) ಎಂದು ಪತ್ತೆ ಹಚ್ಚಲಾಗಿದೆ.
ಈತ ಬಂಗ್ರ ಕೂಳೂರು ಕಡೆಗೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಮಾದಕ ವಸ್ತುಗಳನ್ನಿಟ್ಟುಕೊಂಡು ಗಿರಾಕಿಗಳಿಗಾಗಿ ಕಾಯುತ್ತಿದ್ದ ಎನ್ನಲಾಗಿದ್ದು, ಈತನ ವಶದಲ್ಲಿದ್ದ ಅಂದಾಜು 56,000 ರೂ. ಬೆಲೆಬಾಳುವ ಮಾದಕ ವಸ್ತುಗಳು, ಮೊಬೈಲ್ ಫೋನ್, 7 ಡೆಬಿಟ್ ಕಾರ್ಡ್‌ಗಳು ಮತ್ತು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.