ಶಬರಿ ಮಲೆ ಏರಿದ ಯುವಕನಿಗೆ ಅಯ್ಯಪ್ಪನಿಂದ ಅಸ್ತು | ಬಾಯಿ ಬಾರದ ಯುವಕನಿಗೆ ಮಾತು ಕೊಟ್ಟ ಮಣಿಕಂಠ|ಮಾಲಾಧಾರನಿಗೆ ಸ್ವಾಮಿ ಶರಣೂ ಅನ್ನೋ ಭಾಗ್ಯ

ಪುತ್ತೂರು: ಅಯ್ಯಪ್ಪ ಸ್ವಾಮಿಯ ಮಹಿಮೆ ಎಂತದ್ದು ಅನ್ನೋದು ಅಯ್ಯಪ್ಪ ಭಕ್ತರಿಗೆ ಅರಿವಾಗಿರುತ್ತದೆ. ಶಬರಿ ಮಲೆಯ ಅಯ್ಯಪ್ಪನ ಲೀಲೆಗಳ ಕಥೆಗಳನ್ನು , ಅಥವಾ ಪವಾಡಗಳನ್ನು ಕೇಳೀರುತ್ತೇವೆ, ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತೆಲೇ ಇರುತ್ತದೆ. ಅಯ್ಯಪ್ಪನ  ಮಹಿಮೆ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.  ಒಂದು ಶಬ್ದ ಮಾತನಾಡಲೂ ಬಾಯಿ ಬಾರದ ಬಾಲಕನೊಬ್ಬ ಒಂದು ವರ್ಷದ ಹಿಂದೆ ಶಬರಿಮಲೆ ಏರಿದ್ದ, ಈ ಬಾರಿ ಮತ್ತೆ ಶಬರಿಮಲೆ ಏರಲು ಮಾಲೆ ಹಾಕಿರುವ ಈ ಬಾಲಕ ಮಾತನಾಡಲು ಆರಂಭಿಸಿದ್ದಾನೆ.

ಪುತ್ತೂರಿನ ಸಾಮೆತ್ತಡ್ಕ ನಿವಾಸಿಯಾದ ಪ್ರಸನ್ನ ಎನ್ನುವವರು ಮಾತನಾಡುವ ಮೂಲಕ ಅಯ್ಯಪ್ಪ ಮಾಲಾಧಾರಿಗಳಿಗೆ ಅಚ್ಚರಿ ತಂದಿದ್ದಾರೆ. ಸಣ್ಣ ಮಕ್ಕಳು ಮೊದ ಮೊದಲಿಗೆ ಯಾವ ರೀತಿ ತೊದಲು ಮಾತನಾಡುತ್ತಾರೋ, ಅದೇ ರೀತಿಯಲ್ಲಿ ಈ ಬಾಲಕ ಮಾತನಾಡಲು ಪ್ರಾರಂಭಿಸಿದ್ದಾರೆ.

ಒಂದಕ್ಷರ ಸರಿಯಾಗಿ ಮಾತನಾಡದ ಪುತ್ತೂರು ನಿವಾಸಿ ಪ್ರಸನ್ನ ಎನ್ನುವ ಬಾಲಕ ಕಳೆದ ವರ್ಷ ಕರುಣಾಮಯಿ ಅಯ್ಯಪ್ಪ ಭಕ್ತವೃಂದ ಪುತ್ತೂರು ಇವರ ತಂಡದಲ್ಲಿ ಅಯ್ಯಪ್ಪ ಮಾಲೆ ಹಾಕಿ, ನಲವತ್ತೆಂಟು ದಿನಗಳ ಕಾಲ ಕಠಿಣ ವೃತಾಚರಣೆ ನಡೆಸಿ ಶಬರಿಮಲೆ ಏರಿದ್ದ.  ಸುಮಾರು 48 ಮೈಲು ದುರ್ಗಮ ಕಾಡಿನ ಹಾದಿಯಲ್ಲಿ ಸಾಗಿ ಸ್ವಾಮಿ ದರ್ಶನವನ್ನು ಪಡೆದಿದ್ದ ಬಾಲಕ ಇದೀಗ ಮಾತನಾಡಲು ಆರಂಭಿಸಿದ್ದಾನೆ.































 
 

ಒಂದು ಶಬ್ದ ಮಾತನಾಡಲೂ ಒಂದು ವರ್ಷಗಳ ಹಿಂದೆ ಚಡಪಡಿಸುತ್ತಿದ್ದ ಈ ಬಾಲಕ ಇಂದು ಅಯ್ಯಪ್ಪ ಸ್ವಾಮಿಯ ಶರಣು ಎನ್ನುತ್ತಾರೆ. ಮಾತು ಬಾಯಿಯಿಂದ ಬರುತ್ತಿದ್ದು, ಎಂಟು ಶರಣುವನ್ನು ಪ್ರಸನ್ನ ಯಾವುದೇ ತೊಂದರೆಯಿಲ್ಲದೆ ಕರೆಯುತ್ತಾರೆ. ನಂತರ ಮಾತನಾಡುವ ಶಬ್ದಗಳಲ್ಲಿ ಅಷ್ಟು ಸ್ಪಷ್ಟವಾಗಿಲ್ಲದಿದ್ದರೂ, ಅರ್ಥವಾಗುವಂತಿದೆ. ಈ ಬಾರಿ ಮತ್ತೆ ಅಯ್ಯಪ್ಪ ಮಾಲೆ ಧರಿಸಿ ಮಲೆ ಏರಲು ಸಿದ್ಧತೆ ನಡೆಸಿದ್ದಾರೆ. ಈ ಬಾರಿ ಮಲೆ ಏರಿದರೆ ಪ್ರಸನ್ನ ಇನ್ನಷ್ಟು ಸ್ಪಷ್ಟವಾಗಿ ಮಾತನಾಡುವ ಸಾಧ್ಯತೆಯಿದೆ ಎನ್ನುವ ನಿರೀಕ್ಷೆಯಲ್ಲಿ ಹಿರಿಯ ಸ್ವಾಮಿಗಳಿದ್ದಾರೆ. ಮೊದಲ ಬಾರಿಗೆ ಮಾಲೆ ಧರಿಸಲು ಬಂದಾಗ ಕೇಳಲು ಮತ್ತು ಮಾತನಾಡಲು ಅಗದ ಸ್ಥಿತಿಯಲ್ಲಿದ್ದ ಪ್ರಸನ್ನನಿಗೆ ಇದೀಗ ಒಂದು ಕಿವಿ ಕೇಳಿಸುವುದರ ಜೊತೆಗೆ ಮಾತನಾಡಲು ಶಬ್ದಗಳು ಬರುತ್ತಿದೆ.

ಮೊದಲ ಬಾರಿಗೆ ಮಾಲೆ ಹಾಕಲು ಬಂದಾಗ ಕೈ ಸನ್ನೆಯ ಮೂಲಕ ತನ್ನ ಮಾತುಗಳನ್ನು ವ್ಯಕ್ತಪಡಿಸುತ್ತಿದ್ದ ಪ್ರಸನ್ನ , ಇದೀಗ ಬಾಯಲ್ಲಿ ಮಾತನಾಡಲಾರಂಭಿಸಿರುವುದು ಗುರು ಸ್ವಾಮಿಗಳಿಗೆ ಸಂತನ ತಂದಿದೆ. ಇಂತಹ ಹಲವು ಉದಾಹರಣೆಗಳನ್ನು ಹಿರಿಯ ಅಯ್ಯಪ್ಪ ಮಾಲಾಧಾರಿಗಳು ಉದಾಹರಣೆ ಸಹಿತ ನೀಡುತ್ತಾರೆ. ಈ ಸಾಲಿಗೆ ಪ್ರಸನ್ನ ಕೂಡಾ ಸೇರಿದ್ದು, ಅಯ್ಯಪ್ಪನ ಮಹಿಮೆಯಿಂದ ಎಲ್ಲವೂ ಸಾಧ್ಯ ಎನ್ನುವುದು ಮತ್ತೊಮ್ಮೆ ಜಗತ್‍ ಪ್ರಸಿದ್ದವಾಗಿದೆ.

ಪುತ್ತೂರಿನ ಮಹಾಲಿಂಗೇಶ್ವರ ಐಟಿಐ ನಲ್ಲಿ ಎರಡನೇ ವರ್ಷದ ಸಿವಿಲ್ ಡಿಪ್ಲೊಮಾ ಮಾಡುತ್ತಿದ್ದಾರೆ.

ಆದರೆ ಅಸ್ತಿಕರಿಗೆ ಈ ವಿಚಾರ ನಂಬಿಕೆಯ ವಿಷಯವಾದರೆ, ನಾಸ್ತಿಕರಿಗೆ ಇದೊಂದು ಚರ್ಚೆಗೆ ಗುರಿಯಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top