ಇಂದು ಸಂಜೆ ಎಸ್‌.ಎಂ ಕೃಷ್ಣ ಅಂತ್ಯಕ್ರಿಯೆ

ಸಿದ್ದರಾಮಯ್ಯ, ಪ್ರಹ್ಲಾದ್‌ ಜೋಶಿ ಸಹಿತ ಗಣ್ಯರಿಂದ ಅಂತಿಮ ನಮನ

ಬೆಂಗಳೂರು : ನಿನ್ನೆ ನಿಧನರಾಗಿರುವ ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಹುಟ್ಟೂರು ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ನಡೆಯಲಿದೆ. ಬೆಳಗ್ಗೆ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗ ಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಸಂಜೆ 3 ಗಂಟೆ ಸುಮಾರಿಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಕೇಂದ್ರದ ಪರವಾಗಿ ಪ್ರಹ್ಲಾದ್‌ ಜೋಶಿ, ಕುಮಾರಸ್ವಾಮಿ ಸೇರಿ ರಾಜಕೀಯ ಗಣ್ಯರು, ಸ್ವಾಮೀಜಿಗಳು, ಅಪಾರ ಅಭಿಮಾನಿಗಳು ಭಾಗವಹಿಸಲಿದ್ದಾರೆ. ಇಂದು ಅಗತ್ಯ ತಯಾರಿಗಳು ನಡೆದಿವೆ. ಡಿಸಿಎಂ ಶಿವಕುಮಾರ್‌ ಸೇರಿ ಪ್ರಮುಖರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.































 
 

ಸೋಮನಹಳ್ಳಿಗೆ 10 ಗಂಟೆ ಬರಲಿರುವ ಕೃಷ್ಣರ ಪಾರ್ಥಿವ ಶರೀರವನ್ನು ಕಾಫಿ ಡೇ ಆವರಣದಲ್ಲಿ ಇಡಲಾಗುತ್ತದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಒಕ್ಕಲಿಗ ಸಂಪ್ರದಾಯದಂತೆ 15ಕ್ಕೂ ಹೆಚ್ಚು ವೈದಿಕರಿಂದ ವಿಧಿವಿಧಾನ ಕಾರ್ಯಗಳು ನಡೆಯಲಿವೆ. ಗಂಧದ ಕಟ್ಟಿಗೆಯಿಂದ ಮೃತದೇಹವನ್ನು ಸುಡುವ ಮೂಲಕ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ.
ಮೃತದೇಹ ಇಡಲಾಗುವ ಜಾಗದಲ್ಲಿ ಜರ್ಮನ್ ಟೆಂಟ್ ಹಾಕಲಾಗಿದ್ದು ಬ್ಯಾರಿಕೇಡ್ ಅಳವಡಿಸಲಾಗಿದೆ. ಮೂರು ಸರತಿ ಸಾಲು ಮೂಲಕ ದರ್ಶನಕ್ಕೆ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ. ವಿಐಪಿಗಳಿಗೆ ಜಿಲ್ಲಾಡಳಿತ ವಿಶೇಷ ಗ್ಯಾಲರಿ ನಿರ್ಮಾಣ ಮಾಡಿದೆ. ಎಸ್.ಎಂ.ಕೃಷ್ಣರ ಕುಟುಂಬಸ್ಥರಿಗೆ ಕಾಫಿ ಡೇ ಕಟ್ಟಡದ ಪಕ್ಕದಲ್ಲೇ ಆಸನದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭವಾಗಲಿದ್ದು 5 ಗಂಟೆ ಒಳಗೆ ಮುಕ್ತಾಯವಾಗಲಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top