ಡಿ.28-29: ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ : ಕಡಬ ತಾಲೂಕು ಸಮಿತಿ ರಚನೆ

ಪುತ್ತೂರು : ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಎರಡನೇ ವರ್ಷದ ವೈಭವದ  ಶ್ರೀನಿವಾಸ ಕಲ್ಯಾಣೋತ್ಸವ ಡಿ.28-29ರಂದು  ನಡೆಯಲಿದ್ದು, ಈ ನಿಟ್ಟಿನಲ್ಲಿ ಕಡಬ ತಾಲೂಕು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಾಧ್ಯಕ್ಷರಾಗಿ ವೆಂಕಟ್ರಮಣ ಕಡಬ, ಅಧ್ಯಕ್ಷರಾಗಿ ಜನಾರ್ದನ ರಾವ್ ಕಡಬ , ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ ದಾಸ್ ಪೂಂಜಾ ಕುಂತೂರು ಹಾಗೂ ಕಾರ್ಯದರ್ಶಿಯಾಗಿ ಗಿರೀಶ್ ಕಡಬ ಅವರನ್ನು ಆಯ್ಕೆ ಮಾಡಲಾಯಿತು.

ಈ  ಸಂದರ್ಭದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು, ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಾಧ್ಯಕ್ಷ ಉಮೇಶ್ ಕೊಡಿಬೈಲು,  ಪ್ರದಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top