ಪುತ್ತೂರು : ಮಂಗಳವಾರ ನಿಧನರಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ , ಮಾಜಿ ವಿದೇಶಾಂಗ ಸಚಿವ , ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ದಿವಂಗತ ಶ್ರೀ ಎಸ್ ಎಂ ಕೃಷ್ಣ ಇವರಿಗೆ ಪುತ್ತೂರು ಭಾರತೀಯ ಜನತಾ ಪಾರ್ಟಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾಧವ್ ಮಾತನಾಡಿ, ನುಡಿನಮನ ಸಲ್ಲಿಸಿದರು. ಬಳಿಕ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ನಗರ ಮಂಡಲ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ , ಬಿಜೆಪಿ ಸಂಘಟನಾ ಪರ್ವದ ಜಿಲ್ಲಾ ಸಹ ಚುನಾವಣಾಧಿಕಾರಿ ಸಾಜ ರಾದಕೃಷ್ಣ ಅಳ್ವ , ಮಾಜಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿ ಮನೆ ಸೇರಿದಂತೆ ಗ್ರಾಮಾಂತರ ಹಾಗೂ ನಗರ ಮಂಡಲಗಳ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ , ಕಾರ್ಯದರ್ಶಿ, ಶಕ್ತಿ ಕೇಂದ್ರದ ಪ್ರಮುಖರು , ಮಹಿಳಾ ಮೋರ್ಚಾದ ಪ್ರಮುಖರು , ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.