ಪುತ್ತೂರು : ಜ.1 : ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ | ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು : ಜ. 1ರಂದು ನಡೆಯುವ ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ (ಕೆಂಡಸೇವೆ ) ಹಾಗೂ ಜ.14 ಮಕರ ಸಂಕ್ರಮಣದಂದು ಭಜನಾ ಮಂಡಳಿಯ ವಾರ್ಷಿಕೋತ್ಸವದ ಪ್ರಯುಕ್ತ ನಡೆಯುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವ ಸ್ಥಾನದಲ್ಲಿ ನಡೆಯಿತು..
ಮೊದಲು ದೈವಕ್ಕೆ ಪ್ರಾರ್ಥನೆ ಸಲ್ಲಿಸಲಾಯಿತು..
ಈ ಸಂದರ್ಭದಲ್ಲಿ ಒತ್ತೆಕೋಲ ಸಮಿತಿ ಅಧ್ಯಕ್ಷ ಭಾಸ್ಕರ್ ಆಚಾರ್ ಹಿಂದಾರು, ಕಾರ್ಯಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿ ಸದಾಶಿವಶೆಟ್ಟಿ ಪಟ್ಟೆ, ಕೋಶಾಧಿಕಾರಿ ಹುಕ್ರ ಮಾಸ್ಟರ್ ಉದಯಗಿರಿ, ಭಜನಾ ಮಂಡಳಿ ಅಧ್ಯಕ್ಷ ಪ್ರವೀಣ್ ಕುಮಾರ್ ಮುಲಾರು ಹಾಗೂ ಭಜನಾ ಮಂಡಳಿ, ಹಾಗೂ ಒತ್ತೆಕೋಲ ಸಮಿತಿ ಸದಸ್ಯರು, ಊರವರು ಉಪಸ್ಥಿತರಿದ್ದರು.