ಪುತ್ತೂರು : ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪುತ್ತೂರು ಬಿಜೆಪಿ ವತಿಯಿಂದ ಪ್ರತಿಭಟನೆ ಡಿ 16ರಂದು ನಡೆಯಲಿದೆ.
ಕಿಲ್ಲೆ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಯ ಬಳಿ ಪ್ರತಿಭಟನೆ ನಡೆಯಲಿದೆ.
ಪುತ್ತೂರು ನಗರಸಭೆಯ 2022-2023ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೊತ್ಥಾನ ಹಂತ 4 ನೇ(ಮುನಿಸಿಪಾಲಿಟಿ) ಯೋಜನೆಯ ಸಹಾಯಧನ ಬಿಡುಗಡೆಗೆ ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
