ಮಂಗಳೂರು: ತೆಂಕು ತಿಟ್ಟು ಯಕ್ಷಗಾನ ರಂಗದ ವೃತ್ತಿಪರ ಯಕ್ಷಗಾನ ಭಾಗವತೆ, ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಲೀಲಾವತಿ ಬೈಪಡಿತ್ತಾಯ (77) ಶನಿವಾರ ನಿಧನರಾಗಿದ್ದಾರೆ.
ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ ಭಟ್ ಮಧೂರು ದೇವಾಲಯದಲ್ಲಿ ದೇವನೃತ್ಯ ಕಲಾವಿದರಾಗಿದ್ದರು.