ಹೆಂಡತಿಯ ಕಾಟ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಂಡ ಅತುಲ್
ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿರುವ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಅವರ ಪತ್ನಿ ನಿಖಿತಾ ಸಿಂಘಾನಿಯಾಳನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಅತುಲ್ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾ ಅರೆಸ್ಟ್ ಆಗಿದ್ದರು. ಈಗ ಹರ್ಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ.
ಮೂವರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇ
ಪತಿ ಆತ್ಮಹತ್ಯೆ ಬಳಿಕ ನಿಖಿತಾ ಪರಾರಿಯಾಗಿದ್ದಳು.
ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಅತುಲ್ ಹೆಂಡತಿ ಮತ್ತು ಅತ್ತೆಮೆನೆಯವರ ಕಾಟ ತಡೆಯಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮೊದಲು ಅವರು 24 ಪುಟಗಳ ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ಹೆಂಡತಿ ಮತ್ತು ಆಕೆಯ ಮನೆಯವರು 3 ಕೋ. ರೂ.ಗಾಗಿ ಕಾಟ ಕೊಡುತ್ತಿರುವುದು, ವಿಚ್ಚೇದನ ಕೇಸಿನಲ್ಲಿ ನ್ಯಾಯಾಧೀಶರೊಬ್ಬರು ಲಂಚಕ್ಕೆ ಬೇಡಿಕೆಯಿಟ್ಟಿರುವುದು ಸೇರಿದಂತೆ ಹಲವು ವಿಚಾರಗಳನ್ನು ಬರೆದಿಟ್ಟಿದ್ದರು. ಈ ಕೇಸ್ ಪುರುಷ ಶೋಷಣೆಯ ಕರಾಳ ಮುಖವನ್ನು ಬಯಲುಗೊಳಿಸಿದ ಕಾರಣಕ್ಕೆ ದೇಶಾದ್ಯಂತ ಸುದ್ದಿಯಾಗಿದೆ. ಸುಪ್ರೀಂ ಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ.