ಮಲ್ಪೆ: ಮೀನುಗಾರಿಕೆ ಇಲಾಖೆಯ ಕಚೇರಿ ಮೀಟಿಂಗ್ ರೂಮ್ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ರೂಮ್ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ನಡೆದಿದೆ.
ಮಂಗಳವಾರ ಬೆಳಗ್ಗೆ ಈ ಘಟನೆ ಗೋಚರಿಸಿದ್ದು, ಉರಿಯುತ್ತಿದ್ದ ಅವಶೇಷಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸಿದ್ದಾರೆ. ರೂಮ್ನೊಳಗಿದ್ದ ಹವಾನಿಯಂತ್ರಕ ಯಂತ್ರಗಳು ಸ್ಫೋಟಗೊಂಡಿದ್ದು, ರೂಮ್ನ ಒಳಗಿದ್ದ ಎಲ್ಲ ಕಡತಗಳು ಸುಟ್ಟು ಹೋಗಿದೆ. ಫ್ಯಾನ್, ಚಯರ್, ಟೇಬಲ್, ಲೈಫ್ಬಾಯ್, ಲೈಫ್ಯಾಕೆಟ್, ಸೇರಿದಂತೆ ಪಾರ್ಟಿಶನ್ ಗೋಡೆಗಳಿಗೆ ಬೆಂಕಿ ತಗುಳಿದೆ. ಬೆಂಕಿ ಇತರ ಕೋಣೆಯನ್ನು ಆವರಿಸಿದರೆ ಈ ಕಟ್ಟಡ ಪೂರ್ತಿ ಬೆಂಕಿಗಾಹುತಿಯಾಗುತ್ತಿತ್ತು ಎಂದು ಹೇಳಲಾಗಿದೆ.
ಘಟನೆಯಿಂದಾಗಿ ಸುಮಾರು 4 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ವಿರುದ್ದ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.