ಪುತ್ತೂರು : ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಪುತ್ತೂರು ದಶಮಾನೋತ್ಸವ ಸಮಿತಿಯ ಸಹಯೋಗದೊಂದಿಗೆ ಒಕ್ಕಲಿಗ ಸ್ವಸಹಾಯ ಸಂಘಗಳ ಒಕ್ಕೂಟ, ಯುವ ಘಟಕ, ಮಹಿಳಾ ಘಟಕ, ಗ್ರಾಮ ಸಮಿತಿಯ ಸಹಕಾರದೊಂದಿಗೆ ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಸ್ವಸಹಾಯ ಸಂಘಗಳಿರುವ ಎಲ್ಲಾ ಗ್ರಾಮಗಳಲ್ಲಿ ದಾಂಪತ್ಯ ಜೀವನದ 50 ವರ್ಷ ಪೂರೈಸಿದ ಮಾದರಿ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪಾಲ್ತಾಡಿ ಗ್ರಾಮದ ಶ್ರೀಧರ ಗೌಡರ ಶ್ರೀ ಗುರು ನಿಲಯದಲ್ಲಿ ಐದು ಜೊತೆ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ ಡಿ.16 ರಂದು ನಡೆಯಿತು.
ದಶಮಾನೋತ್ಸವ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಮಾತನಾಡಿ ದಾಂಪತ್ಯ ಜೀವನದ ಪ್ರತಿ ಹೆಜ್ಜೆಯಲ್ಲೂ ಒಂದಾಗಿ ಸಾಗಿದ ಈ ದಂಪತಿಗಳು ಸಮಾಜಕ್ಕೆ ಮಾದರಿ ಎಂದರು.
ಕಾರ್ಯಕ್ರಮವನ್ನು ksrtc ನಿವೃತ್ತ ಚಾಲಕರಾದ ಸತ್ಯನಾರಾಯಣ ಉದ್ಘಾಟಿಸಿದರು. ಒಕ್ಕೂಟದ ಅಧ್ಯಕ್ಷ ಜಯರಾಮ ಗೌಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಿರಿಯರಾದ ಶ್ರೀಧರ ಗೌಡ ಅಂಗಡಿಹಿತ್ಲು, ದಶಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಹೂವಪ್ಪ ಗೌಡ, ಪಾಲ್ತಾಡಿ ಗ್ರಾಮ ಸಮಿತಿಯ ಅಧ್ಯಕ್ಷ ವಿದ್ಯಾಧರ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾವತಿ ಶುಭ ಹಾರೈಸಿದರು.
ದಾಂಪತ್ಯ ಜೀವನದ 50 ವರ್ಷ ಪೂರೈಸಿದ ದಂಪತಿಗಳಾದ ಕೇಶವ ಗೌಡ ಮತ್ತು ಸೀತಮ್ಮ ಪಾರ್ಲ, ಮೋನಪ್ಪ ಗೌಡ ಮತ್ತು ದೇವಕಿ ಪಾರ್ಲ, ಕುಶಾಲಪ್ಪ ಗೌಡ ಮತ್ತು ಕಮಲ ಪಲ್ಲತ್ತಡ್ಕ , ರಾಮಣ್ಣ ಗೌಡ ಮತ್ತು ಶಿವಮ್ಮ ಪಲ್ಲತ್ತಡ್ಕ , ಕುಶಾಲಪ್ಪ ಗೌಡ ಮತ್ತು ಸೇಸಮ್ಮ ಅಲ್ಯಾಡಿ ದಂಪತಿಗಳನ್ನು ಸನ್ಮಾನಿಸಲಾಯಿತು.
ಅನಾರೋಗ್ಯದಿಂದ ಕಾರ್ಯಕ್ರಮಕ್ಕೆ ಬಾರದ ದಂಪತಿಗಳಾದ ಕುಂಜಾಡಿ ಎಲ್ಯಣ್ಣ ಗೌಡ ಮತ್ತು ನೀಲಮ್ಮ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಲಾಯಿತು.
ಸಾಮೂಹಿಕ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಪ್ರೇರಕಿ ಶ್ರೀಮತಿ ಹೇಮಲತಾ ಸ್ವಾಗತಿಸಿ, ಪರಿಚಯ ಪತ್ರ ವಾಚಿಸಿದರು. ಶ್ರೀಧರ ಗೌಡ ವೀಳ್ಯ ನೀಡಿ ಅತಿಥಿಗಳನ್ನು ಬರಮಾಡಿಕೊಂಡರು. ಮೇಲ್ವಿಚಾರಕರಾದ ವಿಜಯಕುಮಾರ್ ಕಾರ್ಯಕ್ರಮ ನಿರೂಪಿಸಿದರು.