ಸವಣೂರು : ಸವಣೂರು ಸೀತಾರಾಮ ರೈ ಅವರ ನೇತೃತ್ವದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಆಧುನಿಕ ಮಾದರಿಯ ಸ್ಮಾರ್ಟ್ ಬೋರ್ಡ್ ಮತ್ತು ಟಿ. ವಿ.ಯನ್ನು ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಉದ್ಘಾಟಿಸಿದರು.
ಸುಮಾರು 1.75 ಲಕ್ಷ ರೂ. ವೆಚ್ಚದ ಈ ಉಪಕರಣವು ಕಂಪ್ಯೂಟರ್, ಟಿ.ವಿ., ರೇಡಿಯೋ, ಕರಿ ಹಲಗೆ, ನೋಟ್ ಪುಸ್ತಕ, ಯೂ ಟ್ಯೂಬ್ ಹಾಗೂ ಇತರ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡಿದೆ.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ನಿರ್ದೇಶಕ ಎನ್. ಸುಂದರ ರೈ, ರಶ್ಮಿ ಅಶ್ವಿನ್ ಶೆಟ್ಟಿ, ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮ್ ಪ್ರಸಾದ್ ಕಲಾಯಿ, ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಜೈರಾಜ್ ಭಂಡಾರಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಮೂರ್ತಿ, ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ ಮತ್ತು ಪೋಷಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.