ಎಲ್ಲ ಕಡೆ ಮಂದಿರ-ಮಸೀದಿ ವಿವಾದ ಬೇಡ : ಮೋಹನ್‌ ಭಾಗವತ್‌ ಕಿವಿಮಾತು

ಎಲ್ಲ ಧರ್ಮಗಳ ಜೊತೆಗೆ ಸಾಮರಸ್ಯದಿಂದ ಬಾಳಲು ಸಲಹೆ

ಪುಣೆ : ಎಲ್ಲೆಂದರಲ್ಲಿ ರಾಮ ಮಂದಿರದಂತಹ ವಿವಾದಗಳನ್ನು ಹುಟ್ಟುಹಾಕಬೇಡಿ ಎಂದು ಆರ್‌ಎಸ್‌ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ಕಿವಿಮಾತು ಹೇಳಿದ್ದಾರೆ. ಪುಣೆಯಲ್ಲಿ ವಿಶ್ವಗುರು ಭಾರತ ಕುರಿತ ಉಪನ್ಯಾಸದಲ್ಲಿ ಪಾಲ್ಗೊಂಡ ಅವರು, ಭಾರತ ಎಲ್ಲ ಧರ್ಮಗಳು ಮತ್ತು ಸಿದ್ಧಾಂತಗಳ ಸಾಮರಸ್ಯದ ಸಹಬಾಳ್ವೆಗೆ ಮಾದರಿಯಾಗಬೇಕು ಎಂದು ಹೇಳಿದರು.

ಉತ್ತರ ಪ್ರದೇಶದ ಸಂಭಾಲ್‌ನ ಶಾಹಿ ಜಾಮಾ ಮಸೀದಿ ಮತ್ತು ರಾಜಸ್ಥಾನದ ಅಜ್ಮೇರ್ ಷರೀಫ್‌ನಂತಹ ಧಾರ್ಮಿಕ ಸ್ಥಳಗಳ ಮೂಲದ ಬಗ್ಗೆ ಇತ್ತೀಚಿನ ವಿವಾದಗಳ ಹಿನ್ನೆಲೆಯಲ್ಲಿ ಅವರು ಈ ಮಾತು ಹೇಳಿದ್ದಾರೆ. ಭಾರತದಲ್ಲಿ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಎಂಬುದಿಲ್ಲ, ಎಲ್ಲರೂ ಒಂದೇ ಎಂದು ಹೇಳಿದರು.































 
 

ತಪ್ಪುಗಳಿಂದ ಭಾರತೀಯರು ಪಾಠ ಕಲಿಯಬೇಕು, ವಿವಾದಾತ್ಮಕ ವಿಷಯಗಳನ್ನು ತಪ್ಪಿಸುವ ಮೂಲಕ ಒಳ್ಳೆಯತನಕ್ಕೆ ಮಾದರಿಯಾಗಬೇಕು. ಉಗ್ರವಾದ, ಆಕ್ರಮಣಶೀಲತೆ, ಬಲಪ್ರಯೋಗ ಮತ್ತು ಇತರರ ದೇವರನ್ನು ಅವಮಾನಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಹೇಳಿದರು. ಈ ದೇಶದಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ಪೂಜಾ ವಿಧಾನವನ್ನು ಅನುಸರಿಸುತ್ತಾರೆ. ಭಾರತ ವಿಶ್ವಕ್ಕೆ ಮಾದರಿಯಾಗಬೇಕು, ವಿಭಿನ್ನ ಧರ್ಮಗಳು ಮತ್ತು ಸಿದ್ಧಾಂತಗಳು ವಿವಾದಗಳಿಲ್ಲದೆ ಹೇಗೆ ಒಟ್ಟಿಗೆ ಬದುಕುತ್ತವೆ ಎಂಬುದನ್ನು ನಾವು ತೋರಿಸಬೇಕು ಎಂದು ಪ್ರತಿಪಾದಿಸಿದ್ದಾರೆ.

ಅಯೋಧ್ಯೆಯಲ್ಲಿನ ರಾಮಮಂದಿರವನ್ನು ಹಿಂದೂಗಳಿಗೆ ನೀಡಬೇಕು ಎಂದು ತೀರ್ಮಾನಿಸಲಾಯಿತು, ಆದರೆ ಬ್ರಿಟಿಷರು ಇದನ್ನು ಗಾಳಿಗೆ ತೂರಿ ಎರಡು ಸಮುದಾಯಗಳ ನಡುವೆ ಬಿರುಕು ಮೂಡಿಸಿದರು. ಅಂದಿನಿಂದ, ಪ್ರತ್ಯೇಕತಾ ಭಾವನೆ ಅಸ್ತಿತ್ವಕ್ಕೆ ಬಂದಿತು. ಅದರ ಪರಿಣಾಮವಾಗಿ ಪಾಕಿಸ್ಥಾನ ಅಸ್ತಿತ್ವಕ್ಕೆ ಬಂತು ಎಂದು ತಿಳಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top